ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ
ಶ್ರೀನಿವಾಸಪುರ: ಜಿಲ್ಲೆಯಲ್ಲಿ ಹಮ್ಮಿಕೊಳ್ಳುತ್ತಿರುವ ಕೈಗಾರಿಕೀಕರಣದಲ್ಲಿ ಸ್ಥಳಿಯರಿಗೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಪಂ ಅಧ್ಯಕ್ಷ ತೂಪಲ್ಲಿ ಆರ್. ನಾರಾಯಣಸ್ವಾಮಿ ಒತ್ತಾಯಿಸಿದರು. ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿ, ಕೋಲಾರ ಜಿಲ್ಲೆಗೆ ಶಾಶತ್ವ ನೀರಾವರಿ ಕಲ್ಪಿಸಲು ಪಕ್ಷಾತೀತ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಎಸ್. ಶ್ರೀನಿವಾಸಪ್ಪ, ಗ್ಯಾಸ್ ಸತೀಶ್, ಏಜಾಜ್ ಪಾಷ, ನಾಸೀರ್, ಶಿವಾರೆಡ್ಡಿ ಇದ್ದರು.
ಸಿಎಂ ರಾಜಿನಾಮೆಗೆ ಒತ್ತಾಯ
ಗುಡಿಬಂಡೆ: ರೈತನ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ಕಾರಣವಾಗಿದ್ದು, ಇದರ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಕೆ. ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಸರ್ಕಾರ ಜಾತಿ ಆಧಾರದ ಮೇಲೆ ರೈತರನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ. ರೈತ ಪರ ಯಾವುದೇ ಸ್ಪಷ್ಟ ಕೃಷಿ ನೀತಿ ರೂಪಿಸಿಲ್ಲ. ಆಳುವ ನಾಯಕರು ರೈತರನ್ನು ನಿರ್ಲಕ್ಷಿಸುತ್ತಿರುವ ಪರಿಣಾಮ ನಿರಂತರ ಹೋರಾಟ ಅನಿವಾರ್ಯವಾಗಿದೆ ಎಂದರು. ಕಾರ್ಯದರ್ಶಿ ವರದರಾಜು, ಪಿಎಲ್ಡಿ ಬ್ಯಾಂಕಿನಲ್ಲಿ ದೊಡ್ಡ ರೈತರಿಗೆ ನೀಡುವಂತೆ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೂ ಸಾಲ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
'ಖಾತ್ರಿ ಯೋಜನೆಸದುಪಯೋಗವಾಗಲಿ'
ಚಿಂತಾಮಣಿ: ಖಾತ್ರಿ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕೆಂದು ತಾಪಂ ಸದಸ್ಯ ಸುಬ್ರಮಣ್ಯಂ ಕರೆನೀಡಿದರು. ತಾಲೂಕಿನ ಊಲವಾಡಿ ಗ್ರಾಪಂ ಆವರಣದಲ್ಲಿ ಖಾತ್ರಿ ಕ್ರಿಯಾ ಯೋಜನೆ ತಯಾರಿಸುವ ವಾರ್ಡ್ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಪಂ ಪಿಡಿಒ ಪಿ. ಕರಿಯಪ್ಪ, ಖಾತ್ರಿ ಯೋಜನೆಯಡಿ ತೆಗೆದುಕೊಳ್ಳಬಹುದಾದ 15 ಪ್ರವರ್ಗಗಳಿಗೆ ಸಂಬಂದಿಸಿದ ಮಾಹಿತಿ ನೀಡಿದರು. ಗ್ರಾಪಂ ಅಧ್ಯಕ್ಷ ವಿ. ಜ್ಯೋತಿ, ಕಾರ್ಯದರ್ಶಿ ಎಚ್.ವಿ. ಉಮಾ, ಉಪಾದ್ಯಕ್ಷ ಯಲ್ಲಮ್ಮ, ನೋಡಲ್ ಅಧಿಕಾರಿ ವೆಂಕಟೇಶಮೂರ್ತಿ, ಸದಸ್ಯರಾದ ಗೋಪಾಲಕೃಷ್ಣರೆಡ್ಡಿ, ನರಸಿಂಹಪ್ಪ, ಮಂಜುನಾಥ, ವೀರಭದ್ರೇಗೌಡ, ಶ್ರೀನಿವಾಸ್, ತಿಪ್ಪಾರೆಡ್ಡಿ, ರಾಮಕೃಷ್ಣಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

