ಕೋಲಾರ

'ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ'

Published On :

ಟೇಕಲ್: ಪ್ರಾಥಮಿಕ ಹಂತದಲ್ಲಿ ಮಕ್ಕಳ ಮಾನಸಿಕ ಮಟ್ಟಕ್ಕೆ ಅನುಗುಣವಾಗಿ ಅವರ ಸುಪ್ತ ಪ್ರತಿಭೆಗಳನ್ನು ಗುರುತಿಸುವ ಮತ್ತು ಪ್ರೋತ್ಸಾಹ ನೀಡುವ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಉತ್ತಮವಾಗಿವೆ ಎಂದು ತಾಪಂ ಸದಸ್ಯೆ ಮಂಜುಳಾ ವೆಂಕಟೇಶ್ ಹೇಳಿದರು. ಕೆ.ಜಿ. ಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ತೋರ್ಪಡಿಸಬೇಕೆಂದು ಹೇಳಿದರು. ಸಮೂಹ ಸಂಪನ್ಮೂಲ ವ್ಯಕ್ತಿ ವಿ.ಎಂ. ಮಂಜಪ್ಪ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಬಹಳ ಮಹತ್ವ ಪಡೆದಿದ್ದು ಶಾಲೆಗಳಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎ.ಕೆ. ವೆಂಕಟೇಶ್, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಪೂರಕ ಎಂದರು. ಕೆ.ಜಿ. ಹಳ್ಳಿ ಕ್ಲಸ್ಟರ್ನ ಬಹುತೇಕ ಶಾಲೆಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದು, ಪಟಾಲಮ್ಮ ಗುಡಿ ರಸ್ತೆಯ ವಿವೇಕಾನಂದ ಶಾಲೆ ಹಾಗೂ ಕೆ.ಜಿ. ಹಳ್ಳಿ, ಹುಣಸಿಕೋಟೆ ಶಾಲೆಗಳು ಬಹುಮಾನ ಪಡೆದವು. ಮುಖ್ಯ ಶಿಕ್ಷಕ ವೆಂಕಟೇಶಪ್ಪ, ವೀರಭದ್ರಯ್ಯ, ಪ್ರಭಾಕರ್, ಮುನಿರತ್ನಮ್ಮ, ಸುಬ್ರಮಣಿ, ಪಾರ್ವತಿ, ಪುಷ್ಪ ಇದ್ದರು.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.