ಕೋಲಾರ

ಉತ್ತಮ ಆಡಳಿತ: ಕಾಂಗ್ರೆಸ್ ಪರ ಜನರ ಒಲವು

Published On :

ಚಿಕ್ಕಬಳ್ಳಾಪುರ: ಉತ್ತಮ ಆಡಳಿತ ನಡೆಸುತ್ತಿರುವುದರಿಂದ ಹೆಚ್ಚಿಗೆ ಜನರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ ಎಂದು ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ನಗರದಲ್ಲಿ ನಡೆಯಲಿರುವ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅ.15 ರಂದು ಸಹಕಾರಿ ರಂಗದಲ್ಲಿ ಕಾರ್ಯ ನಿರ್ವಹಿಸುವ ಆಸಕ್ತಿ ಯಾರಿಗೆ ಇದೆಯೋ ಅವರು ಸ್ಪರ್ಧಿಸಬಹುದು. ಅಂತವರಿಗೆ ಪೂರ್ಣ ಬೆಂಬಲ ನೀಡಲಾಗುವುದು. ಸಹಕಾರಿ ರಂಗದಲ್ಲಿ ಅನುಭವವಿರುವ 10 ಮಂದಿಯ ತಂಡ ರಚಿಸಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದರು. ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಬೇಕು. ವಿರೋಧಿಗಳ ನಂಬಿಕೆ ಹುಸಿಗೊಳಿಸಿ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ಮಾಡಬೇಕು ಎಂದರು. ಪುರದಗಡ್ಡೆ ಕೃಷ್ಣಪ್ಪ ಮಾತನಾಡಿ, ನಮ್ಮಲ್ಲಿ ಇತ್ತೀಚೆಗೆ ಹಿತ ಶತ್ರುಗಳ ಕಾಟ ವಿಪರೀತವಾಗಿದೆ. ಇಂತವರಿಗೆ ಮತದಾರರೇ ಬುದ್ದಿ ಕಲಿಸಲಿ. ಯಾರೂ ಗಾಳಿ ಮಾತಿಗೆ ಬೆಲೆ ಕೊಡಬೇಡಿ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕಂಕಣ ಬದ್ಧರಾಗಿ ಎಂದು ಸೂಚಿಸಿದರು. ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಲಾಯಿತು. ಶನಿವಾರ ನಗರದ ಸಿಟಿಜನ್ ಕ್ಲಬ್‌ನಲ್ಲಿ ಮಧ್ಯಾಹ್ನ 3ಕ್ಕೆ ನಡೆಯುವ ಸಭೆಯಲ್ಲಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಯಿತು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಪಿ.ಎನ್. ಕೇಶವರೆಡ್ಡಿ, ಎಸ್.ವೈ. ಮರಿಯಪ್ಪ, ಸುಬ್ಬರಾಯಪ್ಪ, ಮರಿಶ್ಯಾಮಪ್ಪ, ಜಯರಾಮ್, ಜಗದೀಶ್ ರೆಡ್ಡಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.