ಕೋಲಾರ

ಅಕ್ರಮ ಮರಳು ಸಾಗಾಣಿಕೆ: 5 ಲಾರಿ, ಟ್ರ್ಯಾಕ್ಟರ್ ವಶ

Published On :

ಚಿಕ್ಕಬಳ್ಳಾಪುರ: ಮರಳು ಸಾಗಾಣಿಕೆ ನಿಷೇಧದ ನಡುವೆಯೂ ಅಕ್ರಮವಾಗಿ ಮರಳನ್ನು ಸಾಗಾಣಿಕೆ ಮಾಡುತ್ತಿದ್ದ 5 ಲಾರಿ ಮತ್ತು ಒಂದು ಟ್ರ್ಯಾಕ್ಟರ್‌ನ್ನು ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ (ನಂದಿ ಕ್ರಾಸ್ ) ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಅರಣ್ಯ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಮಂಗಳವಾರ ಮುಂಜಾನೆ ಕಾರ್ಯಾಚರಣೆಯನ್ನು ಕೈಗೊಂಡಿದ್ದು ಈ ಸಂದರ್ಭದಲ್ಲಿ ಅಕ್ರಮವಾಗಿ 5 ಲಾರಿ ಮತ್ತು ಒಂದು ಟ್ರ್ಯಾಕ್ಟರ್‌ನಲ್ಲಿ ಪರವಾನಗಿ ಹೊಂದಿರದೇ ಮರಳನ್ನು ಸಾಗಾಣಿಕೆ ಮಾಡಲಾಗುತ್ತಿತ್ತು. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿ ವಾಹನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಗಾಂಧಿ ಜಯಂತಿ
ಚಿಕ್ಕಬಳ್ಳಾಪುರ: ನಗರದ ಹೊರ ವಲಯದಲ್ಲಿರುವ (ಚೊಕ್ಕಹಳ್ಳಿ ಬಳಿ) ಶ್ರೀ ಸಾಯಿರಾಂ ಇಂಟರ್‌ನ್ಯಾಷನಲ್ ಶಾಲೆಯ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಅ.2 ರಂದು ಬೆಳಿಗ್ಗೆ 10.30 ಕ್ಕೆ ಬೃಹತ್ ಮೆರವಣಿಗೆ  ಹಮ್ಮಿಕೊಳ್ಳಲಾಗಿದೆ. ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಸುಮಾರು 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಂಧಿ ಟೋಪಿ ಧರಿಸಿ ಸಮವಸ್ತ್ರದಲ್ಲಿ ಮೆರವಣಿಗೆ ನಡೆಸಿ ಗಾಂಧೀಜಿಯವರ ಸ್ಮರಣೆ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.