ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ: ಒಬ್ಬರ ಸಾವು
ಗುಡಿಬಂಡೆ: ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ-7 ರ ಬಂಡಹಳ್ಳಿ ಕ್ರಾಸ್ನಲ್ಲಿ ಸಂಭವಿಸಿದೆ. ಮಂಗಳವಾರ ಕಾರ್ಮಿಕ ನರಸಿಂಹಪ್ಪ(46) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಟ್ರ್ಯಾಕ್ಟರ್ನಲ್ಲಿದ್ದ ಅದೇ ಗ್ರಾಮದ ಮಂಜುನಾಥ, ಶ್ರೀನಾಥ ಮತ್ತು ಟ್ರ್ಯಾಕ್ಟರ್ ಚಾಲಕ ನಾಗರಾಜು 3 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಡಿಬಂಡೆ ಪೊಲೀಸರು ಸ್ಥಳಕ್ಕೆ ತನಿಖೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಂಧೀಜಿ ವಿಚಾರಧಾರೆಗಳ ಜಾಗೃತಿ
ಗುಡಿಬಂಡೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅ.2 ರಂದು ನೆಹರು ಯುವಕೇಂದ್ರ ಹಾಗೂ ಸ್ಥಳೀಯ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ವಿಚಾರಧಾರೆಗಳ ಕುರಿತ ಕಾರ್ಯಾಗಾರ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಛಾಯಾಗ್ರಾಹಕರ
ಸಂಘಕ್ಕೆ ಆಯ್ಕೆ
ಚಿಕ್ಕಬಳ್ಳಾಪುರ: ಛಾಯಾಚಿತ್ರಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಜಿ.ಸೀತಾರಾಮರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಭೆಯ ಅಧ್ಯಕ್ಷತೆ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ಜೋಸೆಫ್ ವಹಿಸಿದ್ದರು. ಸಂಘದ ಅಧ್ಯಕ್ಷರಾಗಿ ಬಿ.ಜಿ.ಸೀತಾರಾಮರೆಡ್ಡಿ, ಜಿಲ್ಲಾ ಕಾರ್ಯದರ್ಶಿ ವಿ.ಶ್ರೀನಿವಾಸ ಚಾರಿ, ಉಪಾಧ್ಯಕ್ಷರಾಗಿ ಜಿ.ವಿ.ಮಂಜುನಾಥ್, ಖಜಾಂಚಿಯಾಗಿ ಗಿರೀಶ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಸಹ ಸಂಘಟನಾ ಕಾರ್ಯದರ್ಶಿ ಶಿವಾನಿ ಶಿವು, ಸಂಚಾಲಕ ಸುರೇಶ್ ಬಾಬು, ನಿರ್ದೇಶಕರಾಗಿ ಜಿ.ಕೃಷ್ಣಾಚಾರಿ, ವಿ.ಗೋಪಾಲ್, ಶ್ರೀನಿವಾಸ್ಆಯ್ಕೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

