ಕೋಲಾರ

ತಾಪಂ: ವರ್ತೂರ್ ಬೆಂಬಲಿಗನಿಗೆ ಜಯ

Published On :

ಕೋಲಾರ: ತಾಲೂಕಿನ ಅರಾಭಿಕೊತ್ತನೂರು ತಾಪಂ ಕ್ಷೇತ್ರದ ಸದಸ್ಯ ನಂಜೇಗೌಡ ನಿಧನದಿಂದ ತೆರವಾದ ಸ್ಥಾನಕ್ಕೆ ಕಳೆದ ಭಾನುವಾರ ನಡೆದ ಚುನಾವಣೆಯಲ್ಲಿ ಶಾಸಕ ವರ್ತೂರು ಪ್ರಕಾಶ್ ಬಣದ ಅಭ್ಯರ್ಥಿ ಆರ್. ಜಗದೀಶ್‌ಗೌಡ ಜಯಭೇರಿ ಬಾರಿಸಿದ್ದಾರೆ.
ಕೋಲಾರ ತಾಲೂಕು ಕಚೇರಿಯಲ್ಲಿ ಮಂಗಳವಾರ ಮತ ಎಣಿಕೆ ಕಾರ್ಯ ನಡೆಯಿತು, ಎಲೆಕ್ಟ್ರಾನಿಕ್ ಮತಯಂತ್ರ ಬಳಕೆಯಿಂದಾಗಿ ಮತ ಎಣಿಕೆ ಬೇಗನೆ ಮುಗಿಯಿತು.
ವರ್ತೂರ್ ಬಣದ ಜಗದೀಶ್‌ಗೌಡ 2819 ಮತಗಳನ್ನು ಪಡೆದರೆ ಜೆಡಿಎಸ್‌ನ ಶ್ರೀನಿವಾಸ್ ಯಾದವ್ 2744 ಮತಗಳನ್ನು ಪಡೆದು 75 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.
ಕಾಂಗ್ರೆಸ್‌ನ ಮಂಜುನಾಥ್ 125 ಹಾಗೂ ಬಿಜೆಪಿಯ ಶ್ರೀನಿವಾಸಪ್ಪ 96 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.
ಶಾಸಕರ ಅಭಿನಂದನೆ: ತಮ್ಮ ಬಣದ ಜಗದೀಶ್‌ಗೌಡರ ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಶಾಸಕ ವರ್ತೂರು ಪ್ರಕಾಶ್, ತಾಪಂ ಚುನಾವಣೆಯಲ್ಲಿ  ಮತದಾರರು ನೀಡಿರುವ ಸಹಕಾರವನ್ನು ಎಂದಿಗೂ ಮರೆಯಲಾರೆ ಎಂದರು.
ಅರಾಭಿಕೊತ್ತನೂರು ತಾಪಂ ಕ್ಷೇತ್ರಕ್ಕೆ ಒಳಪಡುವ ಎಲ್ಲಾ ಗ್ರಾಮಗಳ ಮತದಾರರಿಗೆ ಋಣಿಯಾಗಿರುವುದಾಗಿ ತಿಳಿಸಿದ ಶಾಸಕರು, ತಾಪಂ ಸದಸ್ಯರು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮೂಲಕ ಜನಮನ್ನಣೆ ಗಳಿಸಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಣ್ಣ, ರಘುರಾಂ, ರಮೇಶ್, ತಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮೀ ನಾರಾಯಣಮೂರ್ತಿ, ರಾಜಪ್ಪ, ಅಮ್ಮೇರಹಳ್ಳಿ ಚಲಪತಿ, ಗ್ರಾಪಂ ಅಧ್ಯಕ್ಷ ರಮೇಶ್, ಆನಂದ್, ಅಪ್ಪಿ, ವರದೇನಹಳ್ಳಿ ವೆಂಕಟೇಶ್ ಹಾಗೂ ವಿವಿಧ ಗ್ರಾಮಗಳ ಗ್ರಾಪಂ ಸದ್ಯರು ಮತ್ತು ತಾಪಂ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.