ಕೋಲಾರ

ರಕ್ತದಾನ ಮೂಲಕ ಪ್ರಾಣದಾತರಾಗಿ: ಕೃಷ್ಣಮೂರ್ತಿ

Published On :

ಚಿಂತಾಮಣಿ: ತುರ್ತು ಪರಿಸ್ಥಿತಿ, ಅಪಘಾತ ಸಂದರ್ಭಗಳಲ್ಲಿ ಸಾಮಾನ್ಯರ ಪ್ರಾಣ ರಕ್ಷಣೆಗಾಗಿ ರಕ್ತದಾನ ಮಾಡುವುದರ ಮೂಲಕ ಪ್ರಾಣದಾತರಾಗಿ ಎಂದು ಪ್ರಾಂಶುಪಾಲ ಕೃಷ್ಣಮೂರ್ತಿ ಕಿವಿಮಾತು ಹೇಳಿದರು.
ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠ. ಈ ನಿಟ್ಟಿನಲ್ಲಿ ಯುವಜನತೆ ಈ ಸಂಬಂಧ ಗಂಭೀರವಾಗಿ ಯೋಚಿಸಬೇಕೆಂದು ಪ್ರಾಂಶುಪಾಲ ಕೃಷ್ಣಮೂರ್ತಿ  ಹಿತವಚನ ಹೇಳಿದರು.
ರಕ್ತದಾನ ಮಾಡುವ ಮುನ್ನ ನಮ್ಮಲ್ಲಿರುವ ಆಂತರಿಕ ಕಾಯಿಲೆಗಳ ಬಗ್ಗೆಯೂ ನಮಗೆ ಮಾಹಿತಿ ಸಿಗಲಿದ್ದು,  ಅವುಗಳಲ್ಲಿ ಸಹ ಸೂಕ್ತ ಚಿಕಿತ್ಸೆ ಪಡೆಯಬಹುದಾಗಿದ್ದು, ರಕ್ತದಾನ ಮತ್ತು ಚಿಕಿತ್ಸೆ ಈ ಎರಡೂ ದೊರಕಲಿದ್ದು ಆರೋಗ್ಯವಂತ ಜೀವನ ನಡೆಸಬಹುದು. ಈ ನಿಟ್ಟಿನಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ರೆಡ್‌ಕ್ರಾಸ್ ಸದಸ್ಯರಾಗಿರುವುದು ಹೆಮ್ಮೆಯ ವಿಚಾರ ಎಂದರು.
ಡಾ.ಜಯಂತಿ ಮಾತನಾಡಿ, ಅನೇಕ ಜನರು ರಕ್ತದ ಕೊರತೆಯಿಂದ ಸಾವನ್ನಪ್ಪಿದ್ದಾರೆ. ಹಾಗಾಗಿ ಯುವಜನತೆ ರಕ್ತದಾನ ಮಾಡಿ ಜನರ ಪ್ರಾಣ ಉಳಿಸಿ ಪ್ರಾಣದಾತರಾಗಿ ಎಂದು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.