ಗಾಂಧಿ ಆದರ್ಶ ಪಾಲಿಸಲು ಶಾಸಕಿ ರಾಮಕ್ಕ ಕರೆ
ಕೆಜಿಎಫ್: ಗಾಂಧೀಜಿ ಅವರ ಆದರ್ಶಗಳು ದೇಶದ ಪ್ರತಿಯೊಬ್ಬ ಪ್ರಜೆಯು ಪಾಲಿಸಬೇಕು ಎಂದು ಕೆಜಿಎಫ್ ಶಾಸಕಿ ವೈ. ರಾಮಕ್ಕ ಹೇಳಿದರು. ಅವರು ನಗರದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಅಧ್ಯಕ್ಷ ಸುರೇಶ್ನಾರಾಯಣ, ನಗರಸಭಾ ಸದಸ್ಯರಾದ ವಿಜಯಕುಮಾರ್, ಕೆ.ಸಿ.ಮುರಳಿ, ಜಯಂತಿ ಶ್ರೀನಿವಾಸ್ ಹಾಜರಿದ್ದರು.
ಕಾಂಗ್ರೆಸ್ ಮುಖಂಡರಾದ ಜಯಪಾಲ್, ಸಂಪತ್ಕುಮಾರ್, ಶ್ರೀಧರ್ರಾಜ್, ರಾಮಮೂರ್ತಿನಾಯ್ಡು, ಜೆಡಿಎಸ್ ಮುಖಂಡರಾದ ಎಂ. ಭಕ್ತವತ್ಸಲಂ, ಕುಲಶೇಖರ್, ಜಯಕರ್ನಾಟಕ ಸಂಘ, ಕರವೇ, ನವಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಕಾರ್ಯಕರ್ತರು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಭ್ರಮಾಚರಿಸಿದರು.
ಕೆಜಿಎಫ್ ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ ಅವರ ನೇತೃತ್ವದಲ್ಲಿ ನಗರಸಭಾ ಕಚೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ವ್ಯವಸ್ಥಾಪಕ ನಂಜುಂಡಸ್ವಾಮಿ, ಹಿರಿಯ ಆರೋಗ್ಯಾಧಿಕಾರಿ ಸರಸ್ವತಿ, ಅಖಿಲಾಬಾನು, ರವೀಂದ್ರ, ಕೃಷ್ಣಮೂರ್ತಿ, ಜಯರಾಂ, ಹರಿನಾಥ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

