ಎನ್ಎಸ್ಎಸ್ ಶಿಬಿರ ಇಂದು ಉದ್ಘಾಟನೆ
ಚಿಕ್ಕಬಳ್ಳಾಪುರ: ತಾಲೂಕಿನ ಚಿಕ್ಕಅರೂರಿನಲ್ಲಿ ಅ.3 ರಿಂದ 9 ರವರೆಗೆ 2013-14ನೇ ಸಾಲಿನ 7 ದಿನಗಳ ವಾರ್ಷಿಕ ಎನ್ಎಸ್ಎಸ್ ವಿಶೇಷ ಶಿಬಿರ ಆಯೋಜಿಸಲಾಗಿದೆ. ಪೆರೇಸಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಅ.3 ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಶಿಬಿರದ ಉದ್ಘಾಟನೆಯನ್ನು ಶಾಸಕ ಡಾ.ಕೆ. ಸುಧಾಕರ್ ನೆರವೇರಿಸುವರು. ಅಧ್ಯಕ್ಷತೆಯನ್ನು ಪ.ಪೂ.ಶಿ. ಇಲಾಖೆಯ ಉಪ ನಿರ್ದೇಶಕ ಎಂ. ಪುಟ್ಟಮಾದಯ್ಯ ವಹಿಸುವರು. ಅನಿತ ರವೀಂದ್ರರೆಡ್ಡಿ, ಮಂಜುಳ, ಪಿ.ಎನ್. ಕೇಶವರೆಡ್ಡಿ, ಅರೂರು ಗ್ರಾಪಂ ಅಧ್ಯಕ್ಷೆ ಪದ್ಮ ವೆಂಕಟರೆಡ್ಡಿ, ಉಪಾಧ್ಯಕ್ಷ ಜಿ. ರಮೇಶ್, ಆರಕ್ಷಕ ವೃತ್ತ ನಿರೀಕ್ಷಕ ಶಿವಕುಮಾರ್ ಭಾಗವಹಿಸಲಿದ್ದಾರೆ.
ಹಿರಿಯ ನಾಗರಿಕರ ದಿನಾಚರಣೆ
ಟೇಕಲ್: ಕೆಜಿ ಹಳ್ಳಿ ಗ್ರಾಪಂ ಆವರಣದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲಾಯಿತು. ನೂರು ವರ್ಷ ದಾಟಿದ ಮುನಿಯಮ್ಮ ವೆಂಕಟೇಶಪ್ಪ ಹಾಗೂ ಹಿರಿಯ ಮುತ್ಸದಿ ಸೀತಾರಾಮಯ್ಯನವರಿಗೆ ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷೆ ಅಲುಮೇಲುಮಂಗಮ್ಮ, ಗ್ರಾಪಂ ಸದಸ್ಯರಾದ ಆರ್. ಮಂಜುಳ, ಶಾಂತಮ್ಮ, ಸದಸ್ಯ ಪದ್ಮನಾಭಯ್ಯ, ಮುನಿಯಪ್ಪ, ಸಿ. ವೆಂಕಟೇಶ್, ಗೋವಿಂದೆಗೌಡ, ಎಂ. ಗೋಪಾಲ್ ಇದ್ದರು.
ಜನಸ್ಪಂದನ ಕಾರ್ಯಕ್ರಮ
ಚಿಕ್ಕಬಳ್ಳಾಪುರ: ತಾಲೂಕಿನ ದಿಬ್ಬೂರು ಗ್ರಾಪಂ ಆವರಣದಲ್ಲಿ ಅ.5 ರಂದು ಬೆಳಗ್ಗೆ 11 ಗಂಟೆಗೆ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ. ಸುಧಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಇದ್ದಲ್ಲಿ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬೇಕೆಂದು ತಾಲೂಕು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

