ಗಾಂಧಿ ವೇಷಧಾರಿಗಳಾಗಿ ವಿದ್ಯಾರ್ಥಿಗಳು
ಚಿಕ್ಕಬಳ್ಳಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಹೊರ ವಲಯದ (ಚೊಕ್ಕಹಳ್ಳಿ) ಶ್ರೀ ಸಾಯಿರಾಮ್ ಇಂಟರ್ ನ್ಯಾಷನಲ್ ಶಾಲೆಯ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಂಧಿ ವೇಷಧಾರಿಗಳಾಗಿ ನಗರದಲ್ಲಿ ಮೆರವಣಿಗೆ ನಡೆಸಿ ಎಲ್ಲರ ಗಮನ ಸೆಳೆದರು. ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಮುಂಭಾಗ ಗಾಂಧಿ ವೇಷಧಾರಿ ವಿದ್ಯಾರ್ಥಿಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಗಾಂಧೀಜಿ ಭಾವಚಿತ್ರ ಹಿಡಿದು ಸಾಗುತ್ತಿದ್ದ ಮೆರವಣಿಗೆಯಲ್ಲಿ ವೇಷಧಾರಿ ಮಕ್ಕಳು ಆಕರ್ಷಕ ಕೇಂದ್ರ ಬಿಂದುವಾಗಿದ್ದರು. ಶಾಲೆಯ ಶಿಕ್ಷಕರು ಮೆರವಣಿಗೆಯಲ್ಲಿ ಮಾರ್ಗದರ್ಶನ ನೀಡಿದರು. ಅಹಿಂಸಾ ಮಾರ್ಗವನ್ನು ಅಸ್ತ್ರವನ್ನಾಗಿಸಿಕೊಂಡು ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಆದರ್ಶ ಜೀವನ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಶಾಲೆಯ ಶಿಕ್ಷಕರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

