ಗ್ರಾಮೀಣ ಅಭಿವೃದ್ಧಿಗೆ ಖಾತ್ರಿ ವರದಾನ
ಬಾಗೇಪಲ್ಲಿ: ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದಾಗ ಗಾಂಧಿಜೀ ಕಂಡಿದ್ದ ಕನಸು ನನಸಾಗುತ್ತದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಭಿಪ್ರಾಯ ಪಟ್ಟರು.
ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಖಾತ್ರಿ ಯೋಜನೆಯಡಿ ಮಾಮಡವಂಕಲ ಕುಂಟೆಯ ಪುನಶ್ಚೇತನ ಕಾಮಾಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಬಾಗೇಪಲ್ಲಿ ಕ್ಷೇತ್ರ ಹಿಂದುಳಿದ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರದ ಖಾತ್ರಿ ಯೋಜನೆ ಕ್ಷೇತ್ರಕ್ಕೆ ವರದಾನವಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಸಾವಿತ್ರಮ್ಮ ಮಾತನಾಡಿ, ಮಳೆಯಾದರೆ ಮಾತ್ರ ನೀರು ಶೇಖರಣೆಯಾಗಲು ಸಾಧ್ಯ. ಆದರೆ ಮಳೆಯೇ ಇಲ್ಲದಿರುವಾಗ ಕೆರೆ, ಕುಂಟೆಗಳನ್ನು ಪುನಶ್ಚೇತನ ಮಾಡುವುದರಿಂದ ಪ್ರಯೋಜನವಿಲ್ಲ. ಶಾಶ್ವತ ನೀರಾವರಿ ಯೋಜನೆಗಾಗಿ ಜಿಲ್ಲೆಯ ಜನಪ್ರತಿನಿಧಿಗಳು ಧ್ವನಿ ಎತ್ತಬೇಕೆಂದರು. ಜಿಪಂ ಸದಸ್ಯೆ ಅಮರಾವತಿ, ತಾಪಂ ಸದಸ್ಯ ಗೋಪಾಕೃಷ್ಣ, ಪರಗೋಡು ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ವೆಂಕಟಲಕ್ಷಮ್ಮ, ಇಓ ಶ್ರೀನಿವಾಸ್, ಪಿ.ವಿ. ನಾಗಪ್ಪ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

