ಕೋಲಾರ

ಬೂಮಿಗುಟ್ಟ ಕೆರೆ ಅಭಿವೃದ್ಧಿಗೆ ಶಾಸಕರಿಂದ ಚಾಲನೆ

Published On :

ಬಂಗಾರಪೇಟೆ: ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಕ್ಷೇತ್ರದ ಘಟ್ಟಕಾಮದೇನಹಳ್ಳಿ ಗ್ರಾಮದ ಬೂಮಿಗುಟ್ಟ ಕೆರೆಯನ್ನು ರು. 10 ಲಕ್ಷ ವೆಚ್ಚದಲ್ಲಿ ಹೂಳು ತೆಗೆದು ಅಭಿವೃದ್ಧಿಗೊಳಿಸಲು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಚಾಲನೆ ನೀಡಿದರು.
ರಾಜ್ಯ ಸರ್ಕಾರ ರಾಜ್ಯದ 12ಸಾವಿರ ಕೆರೆಗಳನ್ನು, ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಲು ಸಂಕಲ್ಪಮಾಡಿದೆ. ಯೋಜನೆಗೆ ಕೇಂದ್ರ ಸರ್ಕಾರದ  ಉದ್ಯೋಗ ಖಾತ್ರಿ ಯೋಜನೆಯ ಅನುದಾನ ಬಳಕೆ ಮಾಡಲಿದೆ. ಖಾತ್ರಿ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ವರ್ಷಕ್ಕೆ 150 ದಿನ ಕೂಲಿ ಸಿಗಲಿದೆ. ಬಡ ಜನರನ್ನೇ ಗುರಿಯಾಗಿಟ್ಟುಕೊಂಡು ಕೇಂದ್ರ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಇದು ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶುದ್ಧವಾದ ನೀರು ಕೊಡಲು ಮುಂದಾಗಿದೆ. ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಿಕೊಡಲು ಸರ್ಕಾರ ಮುಂದಾಗಿದೆ. ಘಟ್ಟಕಾಮದೇನಹಳ್ಳಿ ಪಂಚಾಯ್ತಿಯಲ್ಲಿ ಹಿಂದೆ ನೀರಿನ ಅಭಾವವಿತ್ತಾದರೂ ಈಗ ಅದನ್ನು ನಿವಾರಿಸಿರುವುದರಿಂದ ಶಾಸಕರು ಗ್ರಾಮಕ್ಕೆ ಕಾಲಿಡುತ್ತಿದ್ದಂತೆ ಗ್ರಾಮಸ್ಥರು ಶಾಸಕರಿಗೆ ಆರತಿ ಬೆಳಗಿ ಪಟಾಕಿ ಸಿಡಿಸಿ ಸಂಭ್ರಮದಿಂದ ಬರಮಾಡಿಕೊಂಡರು. 7ರಂದು ಪಟ್ಟಣದಲ್ಲಿ 5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡುವ ಮೂಲಕ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಪಣ ತೊಟ್ಟಿರುವುದಾಗಿ ತಿಳಿಸಿದರು. ಜಿಪಂ ಸದಸ್ಯೆ ನಾರಾಯಣಮ್ಮ ಶಿವಣ್ಣ, ಮುನಿಯಪ್ಪ, ಕೆ. ಚಂದ್ರಾರೆಡ್ಡಿ, ಬ್ಲಾಕ್ ಅಧ್ಯಕ್ಷ ಮಂಜುನಾಥ್, ಪಾರ್ಥಸಾರಥಿ, ಹೊಸರಾಯಪ್ಪ,ಪಿಡಿಒ ನಾರಾಯಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.