ಕೆಜಿಎಫ್ ಕ್ಷೇತ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಿ
ಕೆಜಿಎಫ್: ಕೆಜಿಎಫ್ ಕ್ಷೇತ್ರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ಜಯಕರ್ನಾಟಕ ಸಂಘದ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.
ಕಳೆದ 2008ರ ವಿಧಾನಸಭಾ ಚುನಾವಣೆ ಮುನ್ನ ಕೆಜಿಎಫ್ ಕ್ಷೇತ್ರವನ್ನು ವಿಸ್ತರಣೆಗೊಳಿಸಲಾಗಿತ್ತು. ಅಂದಿನಿಂದ ಕೆಜಿಎಫ್ ಕ್ಷೇತ್ರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ನಿರಂತರವಾಗಿ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದೆ. ಸುಮಾರು ವರ್ಷಗಳ ಹಿಂದಿನಿಂದಲೂ ಕೆಜಿಎಫ್ ಕ್ಷೇತ್ರದಲ್ಲಿ ವಿಶೇಷ ಪೊಲೀಸ್ ವರಿಷ್ಠಾಧಿಕಾರಿ, ನ್ಯಾಯಾಲಯ, ಉಪತಹಸೀಲ್ದಾರ್ ಸೇರಿದಂತೆ ಇತರೆ ವಿವಿಧ ಸರ್ಕಾರ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಕ್ಷೇತ್ರದಲ್ಲಿ 165 ಗ್ರಾಮಗಳನ್ನು ಒಳಗೊಂಡಿದೆ. ಈ ಹಿಂದೆ ಆಡಳಿತ ನಡೆಸಿದಂತಹ ಬಿಜೆಪಿ ಸರ್ಕಾರದ ಅಂದಿನ ಮುಖ್ಯಮಂತ್ರಿಗಳು ರಾಜ್ಯದ ನೂತನವಾಗಿ ಹಲವಾರು ತಾಲ್ಲೂಕುಗಳನ್ನು ಸೇರ್ಪಡೆ ಮಾಡಿದ ಪಟ್ಟಿಯಲ್ಲಿ ಕೆಜಿಎಫ್ ಕ್ಷೇತ್ರವನ್ನು ಕೈಬಿಡಲಾಗಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿ ಸರ್ಕಾರದ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಕೆಜಿಎಫ್ ಕ್ಷೇತ್ರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನು ಉಪತಹಸೀಲ್ದಾರ್ ಇನಾಯತ್ತುಲ್ಲಾ ಖಾನ್ ಅವರಿಗೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಯಕರ್ನಾಟಕ ಸಂಘದ ಕೆಜಿಎಫ್ ಘಟಕದ ಅಧ್ಯಕ್ಷ ಎ. ಚಂದರ್, ಶಂಸುದ್ದೀನ್, ಸಕ್ಸೂದ್ಉಮ್ರಾನ್, ಎಂ. ಶಶಿಧರ್, ಆನಂದಾಚಾರಿ, ಜಶ್ವಂತ್, ಎನ್.ಬಾಬು, ಸೈಯದ್ಅಸ್ಲಾಂ, ರವಿಂದ್ರಕುಮಾರ್, ಕುಮಾರ್, ನಜೀರ್ಅಹ್ಮದ್, ವೆಂಕಟೇಶ್, ಆರ್.ಶ್ರೀನಿವಾಸ್ರೆಡ್ಡಿ, ಇಮ್ರಾನ್ಪಾಷಾ, ಅಬ್ದುಲ್ಶಫಿ, ಮನೋಹರನ್, ಸೈಯದ್ಅಪ್ಸರ್ ಸೇರಿದಂತೆ ಇತರೆ ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

