ಗಾಂಧಿ ತತ್ವ ಮೈಗೂಡಿಸಿಕೊಳ್ಳಿ: ರಾಜಶೇಖರ್
ಗುಡಿಬಂಡೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶ, ತತ್ವಗಳು, ವಿಚಾರಧಾರೆಗಳನ್ನು ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಬೇಕೆಂದು ನ್ಯೂ ಪಬ್ಲಿಕ್ ಶಾಲೆ ಕಾರ್ಯದರ್ಶಿ ಪಿ.ಎನ್. ರಾಜಶೇಖರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಟ್ಟಣದ ನ್ಯೂ ಪಬ್ಲಿಕ್ ಶಾಲೆಯ ಆವರಣದಲ್ಲಿ ಜಿಲ್ಲಾ ಪರಿಸರ ಸಂರಕ್ಷಣಾ ವೇದಿಕೆ, ಪ್ರಾದೇಶಿಕ ಅರಣ್ಯ ಇಲಾಖೆ ಹಾಗೂ ನ್ಯೂ ಪಬ್ಲಿಕ್ ಶಾಲೆ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜಶೇಖರ್ ಇತ್ತೀಚೆಗೆ ಗಾಂಧೀಜಿಯವರ ಆದರ್ಶಗಳು ಕೇವಲ ಪುಸ್ತಕ, ಭಾಷಣಗಳಿಗೆ ಮಾತ್ರ ಸೀಮಿತವಾಗುತ್ತಿರುವುದು ವಿಷಾದನಿಯವಾದುದು.
ಆದ್ದರಿಂದ ಪ್ರತಿಯೊಬ್ಬರು ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಗಾಂಧೀಜಿಯವರ ರಾಮರಾಜ್ಯವನ್ನು ಕಟ್ಟಬೇಕೆಂದರು. ಅ.2 ಕೇವಲ ಗಾಂಧೀಜಿಯವರ ಜನ್ಮದಿನಾಚರಣೆಯಲ್ಲಿ ಇಲ್ಲಿವರೆಗೂ ಕಾಣದ ನಿಸ್ವಾರ್ಥ ಪ್ರಾಮಾಣಿಕ ರಾಜಕಾರಣಿಯಾದ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆಯೂ ಇದೇ ದಿನ. ಇವರ ತತ್ವಗಳನ್ನು ಯುವಜನತೆ ಮೈಗೂಡಿಸಿಕೊಂಡು ಭ್ರಷ್ಟಾಚಾರ ರಹಿತ ಸಮಾಜದ ನಿರ್ಮಾಣದೊಂದಿಗೆ ಭವ್ಯ ಭಾರತ ಕಟ್ಟುಲು ಶ್ರಮ ವಹಿಸಬೇಕೆಂದರು.
ನಂತರ ಜಿಲ್ಲಾ ಪರಿಸರ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಗುಂಪು ಮರದ ಆನಂದ್ ಮಾತನಾಡಿ ಅರಣ್ಯ ನಾಶದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಒಂದು ಕಡೆ ಅತಿವೃಷ್ಟಿ, ಮತ್ತೊಂದು ಕಡೆ ಅನಾವೃಷ್ಟಿ ಸಂಭವಿಸಿ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮಗುವೂ ಒಂದು ಗಿಡವನ್ನು ನೆಟ್ಟು ಅರಣ್ಯವನ್ನು ಬೆಳೆಸಿ ಮುಂದಿನ ಪೀಳಿಗೆಗೆ ಉತ್ತಮ ವಾತವರಣವನ್ನು ನಿರ್ಮಿಸಲು ಪಣ ತೊಡಬೇಕೆಂದರು.
ಕಾರ್ಯಕ್ರಮಕ್ಕೂ ಮುನ್ನಾ ಶಾಲೆಯ ಆವರಣದಲ್ಲಿ ವಿವಿಧ ತಳಿಯ ಸಸಿಗಳನ್ನು ಗಣ್ಯರು, ಶಾಲೆಯ ಸಿಬ್ಬಂದಿ, ಪತ್ರಕರ್ತರು ನೆಟ್ಟು ಕಾರ್ಯಕ್ರಮಕ್ಕೆ ಮೆರಗು ತಂದರು.
ಬಿಇಎಲ್ ಮಾಜಿ ವ್ಯವಸ್ಥಾಪಕ ಕೃಷ್ಣಮೂರ್ತಿ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಮಂಜುನಾಥ್, ಜಾವಿದ್ಪಾಷ, ಜಿಲ್ಲಾ ಪರಿಸರ ಸಂರಕ್ಷಣಾ ವೇದಿಕೆಯ ಧನಪಾಲಲ್ಸಿಂಗ್, ನ್ಯೂ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಲ್. ಪರಿಮಳ, ಸಹ ಶಿಕ್ಷಕರಾದ ಪಿ.ಬಿ. ಗೋಪಾಲಕೃಷ್ಣ, ಬಾಬಾಜಾನ್, ಮೊಹಸೀನ, ವೆಂಕಟೇಶ್, ಅಶ್ವತ್ಥಪ್ಪ, ನಸ್ರೀನ್ ತಾಜ್, ಗಂಗಾಧರ್, ಅಶ್ವತ್ಥಮ್ಮ, ಶಿಲ್ಪಾ, ಪೂರ್ಣಿಮಾ, ಮಂಜುಳಾ ಶಾಲೆಯ ಸಿಬ್ಬಂದಿ ಮನಮೋಹನ್ರಾಜ್ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

