ಜನರ ಬಳಿಗೆ ಶಾಸಕರ ನಡಿಗೆ
ಬಾಗೇಪಲ್ಲಿ: ಜನರ ಬಳಿಗೆ ನನ್ನ ನಡಿಗೆ ಕಾರ್ಯಕ್ರಮದ ಅಂಗವಾಗಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಪಾದಯಾತ್ರೆಯ ಮೂಲಕ ಮನೆಮನೆಗೂ ತೆರಳಿ ನಾಗರಿಕರ ಕುಂದುಕೊರತೆಗಳನ್ನು ವಿಚಾರಿಸಿದರು.
ಶ್ರೀಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅವರು, ಪಟ್ಟಣದ 1 ನೇ ವಾರ್ಡಿನಿಂದ ಪಾದಯಾತ್ರೆ ನಡೆಸಿ ಜನಸಾಮಾನ್ಯರಿಂದ ಆಹವಾಲು ಸ್ವೀಕರಿಸಿದರು. ಪಟ್ಟಣದ ಬಹುತೇಕ ಕಡೆಗಳಲ್ಲಿ ಯುಜಿಡಿ ಕಾಮಗಾರಿಯಿಂದ ಜನತೆ ತೀವ್ರ ತೊಂದರೆ ಅನುಭವಿಸುತ್ತಿರುವುದನ್ನು ನೋಡಿದ ಶಾಸಕರು, ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳನ್ನು ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡರು. ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದಲ್ಲಿ ಮೂಲ ಸಮಸ್ಯೆಗಳಿದ್ದು, ಈಗಾಗಲೇ 20 ಕೋಟಿ ವೆಚ್ಚದ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ. ನಂತರ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಶಾಸಕರ ಪಾದಯಾತ್ರೆ ಸೋಮವಾರ ಪಟ್ಟಣದಲ್ಲಿ ಮುಂದುವರೆಯುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಶ್ರೀಕಾಂತ್ ತಿಳಿಸಿದರು. ಗಂಗರಾಜು, ಚನ್ನಮ್ಮ, ವೇಣು, ಭಾಸ್ಕರ, ಆ.ನ. ಮೂರ್ತಿ, ಶ್ರೀನಿವಾಸರೆಡ್ಡಿ, ಜಯಪ್ರಕಾಶ್ ನಾರಾಯಣ್, ಚಿನ್ನನರಸಿಂಹಯ್ಯ, ಚೆಂಡೂರ್ ವೆಂಕಟೇಶ್, ಜಿ. ಚಂದ್ರಶೇಖರ್, ಎಇ ಪ್ರಭಾಕರರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

