ನಗರಸಭೆ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ನಗರಸಭೆಯ ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ನಗರದ ಅಭಿವೃದ್ಧಿಯಲ್ಲಿ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಕುಳಿತು ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.
ನಗರಸಭೆ ಕೇವಲ ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಮಾದರಿಯಾಗಿದೆ. ಜನರ ಅಭಿವೃದ್ಧಿಯ ಬಗ್ಗೆ ಗಮನ ಕೊಡುತ್ತಿಲ್ಲ ಎಂದು ಆರೋಪಿಸಿದರು. ನಗರದಲ್ಲಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಕಳಪೆ ಗುಣಮಟ್ಟದಲ್ಲಿ ಕೆಲಸ ಮಾಡಿ ಕೇವಲ ಸರ್ಕಾರದ ಹಣವನ್ನು ಪೋಲು ಮಾಡಲಾಗುತ್ತಿದೆ. ಬೀದಿನಾಯಿಗಳ ಹಾವಳಿ ನಿಯಂತ್ರಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸಬೇಕು. ನಗರದಲ್ಲಿ ಜಿಲ್ಲಾ ಕನ್ನಡ ಭವನ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರವೇ ಅಧ್ಯಕ್ಷ ಸಿ.ಪಿ. ಮಂಜುನಾಥ ಗೌಡ, ರಿಜ್ವಾನ್, ರಾಮರಾಜ್, ಸಾಧಿಕ್, ನಿಜಾಮುದ್ದೀನ್, ಗಂಗಾಧರ್, ಎಸ್. ಮಂಜುನಾಥ್, ಶವಿದ್, ಪ್ರತಾಪ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

