ಯಶಸ್ವಿನಿ ಯೋಜನೆ: ನೋಂದಣಿಗೆ ಸೂಚನೆ
ಚಿಕ್ಕಬಳ್ಳಾಪುರ: ಸಹಕಾರ ಸಂಘಗಳ ರೈತ ಸದಸ್ಯರು ಯಶಸ್ವಿನಿ ಯೋಜನೆಗೆ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕೆಂದು ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಶಸ್ವಿನಿ ಯೋಜನೆಯನ್ನು 2013-14ನೇ ಸಾಲಿಗೆ ಮುಂದುವರೆಸಲು ಸರ್ಕಾರವು ತೀರ್ಮಾನಿಸಿದ್ದು, ಸದಸ್ಯತ್ವಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮಾತ್ರ 210 ರು. ಬದಲಿಗೆ ಕೇವಲ 10 ರು. ಗಳನ್ನು ಪಾವತಿಸಬೇಕಾಗಿದ್ದು ಉಳಿದ 200 ರು.ಗಳನ್ನು ಸರ್ಕಾರವೇ ಭರಿಸುತ್ತದೆ. ಉಳಿದವರಿಗೆ 210 ರು. ಶುಲ್ಕ. ನೋಂದಣಿಗೆ ಅ.15 ಕೊನೆ ದಿನವಾಗಿದೆ. ಯಶಸ್ವಿನಿ ಯೋಜನೆಯಡಿ ಸದಸ್ಯತ್ವ ಪಡೆಯಲು ಯಾವುದೇ ಗ್ರಾಮೀಣ ಸಹಕಾರ ಸಂಘದಲ್ಲಿ ಸದಸ್ಯರಾಗಿ ಕನಿಷ್ಠ 3 ತಿಂಗಳಾಗಿರಬೇಕೆನ್ನುವುದರ ಬದಲಾಗಿ ಈಗ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸಮಯದಲ್ಲಿ ಆ ಗ್ರಾಮೀಣ ಭಾಗದ ಸಹಕಾರ ಸಂಘದ ಸದಸ್ಯರಾಗಿದ್ದರೆ ಸಾಕು ಎಂದು ಸರ್ಕಾರ ಹೊಸದಾಗಿ ಆದೇಶ ಹೊರಡಿಸಿದ್ದು ರೈತರು ಯಶಸ್ವಿನಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ.
ಸಕಾಲ ಸಹಾಯ ಕೇಂದ್ರಗಳಿಗೆ ಅರ್ಜಿ
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಸಕಾಲ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು ಈ ಸಹಾಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ ಪದವೀಧರ ಹಾಗೂ ಗಣಕಯಂತ್ರದಲ್ಲಿ ವ್ಯವಹರಿಸುವ ಪರಿಣತಿ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ಮಾಹೆ 10 ಸಾವಿರ ರು. ಗಳಂತೆ ಗೌರವ ಧನವನ್ನು 6 ತಿಂಗಳವರೆಗೆ ಮಾತ್ರ ನೀಡಲಾಗುತ್ತದೆ. ಆ ನಂತರ ಆನ್ಲೈನ್ ಸೇವೆಗಳನ್ನು ನೀಡಿ ಸೇವಾ ಶುಲ್ಕ ಪಡೆದು ಸಹಾಯ ಕೇಂದ್ರಗಳನ್ನು ನಿರ್ವಹಿಸಬೇಕಾಗುತ್ತದೆ. ಅರ್ಜಿಗಳನ್ನು ಅ.5 ರೊಳಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

