ಚಿಂತಾಮಣಿ ತಾಲೂಕಿನಲ್ಲಿ ನವರಾತ್ರಿ ಉತ್ಸವಗಳು
ಚಿಂತಾಮಣಿ: ತಾಲೂಕಿನ ಪುರಾಣ ಪ್ರಸಿದ್ಧ ಆಲಂಬಗಿರಿ ಶ್ರೀ ಲಕ್ಷ್ಮಿ ವೆಂಕಟರವಣಸ್ವಾಮಿ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಶುಕ್ರವಾರದಿಂದ ಪ್ರಾರಂಭವಾಗಿವೆ.
ನವರಾತ್ರಿ ಅಂಗವಾಗಿ ಉತ್ಸವ ಮೂರ್ತಿಗಳನ್ನು ವಿಶೇಷ ಶೇಷವಾಹನದಲ್ಲಿ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗುವುದು. ಭಜನಾ ಮಂಟಪದಲ್ಲಿ ಪ್ರತಿದಿನ ಸಂಜೆ ನಾಮ ಸಂಕೀರ್ತನೆ ನಡೆಯುತ್ತದೆ.
ಪ್ರತಿನಿತ್ಯ ಬೆಳಿಗ್ಗೆ ಸುಪ್ರಭಾತ ಸೇವೆಯೊಂದಿಗೆ ಕಾರ್ಯಕ್ರಮಗಳು ಆರಂಭವಾಗುತ್ತದೆ. ನವರಾತ್ರಿಯ ಪ್ರಯುಕ್ತ ವಿಶೇಷ ಸೇವೆಗಳನ್ನು ಏರ್ಪಡಿಸಲಾಗಿದೆ. ವಿಜಯದಶಮಿಯಂದು ರಾಜಬೀದಿಯಲ್ಲಿ ಭಜನಾ ತಂಡಗಳೊಂದಿಗೆ ಸ್ವಾಮಿಯ ಉತ್ಸವವನ್ನು ಬನ್ನಿ ಮಂಟಪಕ್ಕೆ ಕರೆದೊಯ್ದು ಬಳಿಕ ಬಳಿ ಶಮಿಪೂಜೆ ಹಾಗೂ ಬಾಣಬಿಲ್ಲುಗಳ ಪೂಜೆ ಇರುತ್ತದೆ.
ಕೈವಾರದಲ್ಲಿ ನವರಾತ್ರಿ: ನಾಲ್ಕುಯುಗಗಳ ಇತಿಹಾಸವಿರುವ ಕೈವಾರ ಕ್ಷೇತ್ರದ ಅಮರನಾರೇಯಣಸ್ವಾಮಿ ದೇವಾಲಯದಲ್ಲಿ ನವರಾತ್ರಿ ಪೂಜೆಗಳು ವಿಜೃಂಭಣೆಯಿಂದ ಪ್ರಾರಂಭವಾಗಿವೆ. ಪ್ರತಿದಿನವೂ ವಿಶೇಷ ಪೂಜೆ,ಅಲಂಕಾರದೊಂದಿಗೆ ನವರಾತ್ರಿ ಪೂಜೆಯನ್ನು ಮಾಡಲಾಗುತ್ತದೆ. ನವರಾತ್ರಿಯ ಪ್ರತಿದಿನ ಕಲ್ಯಾಣೋತ್ಸವ ಮಂಟಪದಲ್ಲಿ ಪಟ್ಟಕ್ಕೆ ಕೂಡಿಸಿರುವ ದೇವರ ಅಷ್ಟಾವಧಾನ ಸೇವೆ ನೆರವೇರಿಸಲಾಗುತ್ತದೆ. ಪ್ರತಿದಿನ ರಾತ್ರಿ ಗ್ರಾಮಸ್ಥರಿಂದ ಭಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಶ್ರೀ ಯೋಗಿ ನಾರೇಯಣ ಮಠದಲ್ಲಿ ನಾದಸುಧಾರಸ ವೇದಿಕೆಯಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನವರಾತ್ರಿಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದೆ.
ವಿಶೇಷ ಉಪನ್ಯಾಸ: ಚಿಂತಾಮಣಿ ಸರ್ಕಾರಿ ಬಾಲಕರ ಪದವಿ ಕಾಲೇಜಿನಲ್ಲಿ ಬೆಳಿಗ್ಗೆ 11 ಗಂಟೆಗೆ ಸದೃಢ ಸಮಾಜ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ವಿಚಾರವಾಗಿ ಪ್ರವಚನಕಾರ ತಳಗವಾರ ಟಿ.ಎಲ್. ಆನಂದ್ರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬ್ರಹ್ಮಾಚಾರಿ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

