ಕೋಲಾರ

ಬಾಲಕಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Published On :

ಗೌರಿಬಿದನೂರು: 7ನೇ ತರಗತಿ ಓದುತ್ತಿರುವ 14ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ತಾಲೂಕಿನ ಬಾದಿಮರಳೂರು ಗ್ರಾಮದಿಂದ ವರದಿಯಾಗಿದೆ. ಶಾಂತಮ್ಮ ಎಂಬವರ ಮಗಳು ಮಂಜುಳ (ಹೆಸರು ಬದಲಿಸಲಾಗಿದೆ) ಅತ್ಯಾಚಾರಕ್ಕೆ ಒಳಗಾಗಿರುವ ನತದೃಷ್ಟೆ ಎನ್ನಲಾಗಿದ್ದು, ಗಂಡನನ್ನು ಕಳೆದುಕೊಂಡಿದ್ದ ಶಾಂತಮ್ಮಳೊಂದಿಗೆ ಕಳೆದ ನಾಲ್ಕೈದು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದನೆನ್ನಲಾದ ರಘು ಎಂಬಾತ ಈ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಶುಕ್ರವಾರ ಶಾಂತಮ್ಮ ಕೂಲಿಗೆ ಹೋಗಿದ್ದ ವೇಳೆ ಆಕೆಯ ಮಗಳು ಒಬ್ಬಳೇ ಮನೆಯಲ್ಲಿರುವುದನ್ನು ಅರಿತ ರಘು ಮನೆಯ ಒಳಗೆ ಹೋಗಿ ಅತ್ಯಾಚಾರ ಎಸಗಿದ್ದಾನೆಂದು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ವೇಳೆ ಬಾಲಕಿ ಹೇಳಿಕೆ ನೀಡಿದ್ದು, ಈ ಹೇಳಿಕೆ ಆದರಿಸಿ ಗ್ರಾಮಾಂತರ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ತಾಯಿ ಶಾಂತಮ್ಮ ದೂರು ನೀಡದೆ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಎ.ಬಿ. ದೇವಯ್ಯ, ಸಿಪಿಐ ನಾಗರಾಜ್ ಭೇಟಿ ನೀಡಿದ್ದು, ಪರಾರಿಯಾಗಿರುವ ಆರೋಪಿ ರಘು ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.


ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

ಗುಡಿಬಂಡೆ: ತಾಲೂಕಿನ ಉಲ್ಲೋಡು ಗ್ರಾಪಂ ವ್ಯಾಪ್ತಿಯ ರೂರಲ್ ಗುಡಿಬಂಡೆ ಭಾಗಕ್ಕೆ 5-6 ದಿನಗಳಿಂದ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಮಹಿಳೆಯರು ಖಾಲಿ ಕೊಡ ಹಿಡಿದು ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ರೂರಲ್ ಗುಡಿಬಂಡೆ ಪ್ರದೇಶದ ಜನತೆ ಸುಮಾರು ಒಂದು ವಾರದಿಂದ ನೀರು ಪೊರೈಸಿಲ್ಲ. ಸಮಸ್ಯೆಯ ಬಗ್ಗೆ ಸಂಬಂದಪಟ್ಟ ಗ್ರಾಪಂ ಅಧ್ಯಕ್ಷ ಹಾಗೂ ಕಾರ್ಯದರ್ಶಿಯವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಮಹಿಳೆಯರು ಆರೋಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.