ಕೋಲಾರ

ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

Published On :

ಚಿಂತಾಮಣಿ: ಮಹಾಲಯ ಅಮಾವಸ್ಯೆ ಅಂಗವಾಗಿ ಮುರುಗಮಲ್ಲ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುತ್ತಿರುವಾಗ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಜನ ಯುವಕರು ಸಾವನ್ನಪ್ಪಿ ಒಬ್ಬನ ಸ್ಥಿತಿ ಚಿಂತಾಜನಕವಾಗಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತಳಗವಾರ ಗ್ರಾಮದ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಘಟನೆ ವಿವಿರ: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಸರ್ಜಾಪುರ ಹಾಗೂ ಗೌರಿಪಾಳ್ಯ ನಿವಾಸಿಗಳಾದ ನದೀಮ್(19), ಜಾಕೀರ್(18), ಮೊಹಮದ್ ಗೌಸ್ (22) ಸೇರಿದಂತೆ ಮತ್ತಿಬ್ಬರು ಸೇರಿ ಶುಕ್ರವಾರ ಮಹಾಲಯ ಅಮಾವಸ್ಯೆ ಅಂಗವಾಗಿ ತಾಲೂಕಿನ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಬೇಟಿ ನೀಡಿ ಹಿಂತಿರುಗುವಾಗ ಘಟನೆ ಸಂಭವಿಸಿದೆ.
ಅಪಘಾತ ನಡೆದ ಕೂಡಲೇ ಸ್ಥಳೀಯರು ಪೊಲೀಸರು ಹಾಗೂ ಆ್ಯಂಬುಲೆನ್ಸ್ಗೆ ಕರೆ ಮಾಡಿದರು. ಕಾರಿನಲ್ಲಿ ಮೃತರ ಕೈ ಮತ್ತು ಕಾಲುಗಳು ಬಸ್ಸಿಗೆ ಸಿಲುಕಿಕೊಂಡ ಪರಿಣಾಮ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.ಕಾರು ಅತಿವೇಗ ಮತ್ತು ಅಜಾಗ್ರತೆಯಿಂದ ಓಡಿಸಿದ್ದು, ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸಣ್ಣತಿಮ್ಮಯ್ಯ, ವೃತ್ತ ನಿರೀಕ್ಷಕ ನಂಜಪ್ಪ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.