ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ಶಿಡ್ಲಘಟ್ಟ: ವಾಲ್ಮೀಕಿ ಜಯಂತಿಯಲ್ಲಿ ಎಲ್ಲಾ ಸಮುದಾಯದವರು ಕೈಜೋಡಿಸುವುದರೊಂದಿಗೆ ಅದ್ಧೂರಿಯಾಗಿ ಆಚರಿಸುವಂತೆ ಶಾಸಕ ಎಂ. ರಾಜಣ್ಣ ಕರೆನೀಡಿದರು. ಅ.18 ರಂದು ಪಟ್ಟಣದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲು ಶಾಸಕ ಎಂ. ರಾಜಣ್ಣ ಅಧ್ಯಕ್ಷತೆಯಲ್ಲಿ ತಾಪಂ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಸರ್ಕಾರಿ ಹಬ್ಬವನ್ನಾಗಿ ಆಚರಿಸುತ್ತಿರುವ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಹಕರಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ವಾಲ್ಮೀಕಿ ಜನಾಂಗದ ಮುಖಂಡರು ಪಾಲ್ಗೊಂಡಿದ್ದರು. ಬಂಕ್ ಮುನಿಯಪ್ಪ ಮಾತನಾಡಿ, ವಾಲ್ಮೀಕಿ ಜಯಂತಿ ಪ್ರಯುಕ್ತ ತಾಲೂಕಿನಾದ್ಯಂತ ಇರುವ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳಿಂದ ಕೀಲುಕುದುರೆ, ಗಾರುಡಿ, ವೀರಗಾಸೆ ಕುಣಿತ ಗಳಿಂದ ಬರುವ ಮೆರವಣಿಗೆಗೆ ತಾಲೂಕು ಅಂಗನವಾಡಿ ಕಾರ್ಯಕರ್ತೆಯರಿಂದ ಪೂರ್ಣಕುಂಭ ವ್ಯವಸ್ಥೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ತಹಸೀಲ್ದಾರ್ ಜೆ.ಎ. ನಾರಾಯಣಸ್ವಾಮಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪಿ.ಎಂ. ರಾಧಾಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಎನ್. ಮುನಿಯಪ್ಪ, ತಾಪಂ ಸದಸ್ಯ ಯರ್ರಬಚ್ಚಪ್ಪ ಇದ್ದರು.
ಕುವೆಂಪು ವಿಚಾರ ಕುರಿತು ಉಪನ್ಯಾಸ
ಕೋಲಾರ: ಕನ್ನಡ ಸಾಹಿತ್ಯ ಸಂಘ ಮತ್ತು ಡಾ. ಬೆಸಗರಹಳ್ಳಿ ಪ್ರತಿಷ್ಠಾನ ವತಿಯಿಂದ ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆ ಮತ್ತು ಕುವೆಂಪುರವರ ವಿಚಾರ ಸಾಹಿತ್ಯ ಕುರಿತು ಡಾ. ಚಂದ್ರಶೇಖರ ನಂಗ್ಲಿ ರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅ.8 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಕೋಲಾರದ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಸಿ. ನಾಗಭೂಷಣ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಅಧ್ಯಯನ ವಿಭಾಗದ ಸಮನ್ವಯಾಧಿಕಾರಿ ಕಾ.ವೆಂ. ಶ್ರೀನಿವಾಸಮೂರ್ತಿರವರಿಂದ ಪ್ರಸ್ತಾವನೆ, ಕನ್ನಡ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಡೊಮಿನಿಕ್, ಎಂ. ಮುನಿಯಪ್ಪ, ವಿ. ನಾಗರಾಜು ಉಪಸ್ಥಿತರಿರುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

