ರಸ್ತೆ ದುರಸ್ತಿ ನಿರ್ಲಕ್ಷ್ಯ: ಸಾರ್ವಜನಿಕರ ಆಕ್ರೋಶ
ಚಿಂತಾಮಣಿ: ರೈಲ್ವೆ ಅಂಡರ್ ಪಾಸ್ ಮುಖ್ಯ ರಸ್ತೆ ಗುಂಡಿಗಳಿಂದ ಕೂಡಿದ್ದು, ಬೈಕ್ ಸವಾರರಿಗೆ ದೂಳಿನ ಅಭಿಷೇಕದ ಜೊತೆಗೆ ಅಪಘಾತಗಳ ಭೀತಿ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಹಿಸಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಮಾಡಿಕೆರಿ ಕ್ರಾಸ್ ಮಾರ್ಗವಾಗಿ ಮದನಪಲ್ಲಿಗೆ ಹೋಗುವ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಮೇಲ್ನೋಟಕ್ಕೆ ಮುಗಿದಿದೆಯೆಂದು ಹೇಳುವ ಗುತ್ತಿಗೆದಾರ ಡಾಂಭೀಕರಣ ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋಗಿರುವುದರಿಂದ ವಾಹನ ಸವಾರರಿಗೆ ಕಿರಿ ಕಿರಿ ಉಂಟಾಗುತ್ತಿದ್ದರೂ ಇತ್ತ ಗಮನ ಹರಿಸದ ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೂತನ ಡಾಂಭೀಕರಣ ರಸ್ತೆ ತಿಂಗಳಲ್ಲೇ ಕಿತ್ತು ಹೋಗಿರುವುದರಿಂದ ಕಾಟಾಚರಕ್ಕೆ ತೇಪೆ ಹಾಕುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.
ಮುಖ್ಯ ರಸ್ತೆಯಾದ ಮದನಪಲ್ಲಿ-ಬೆಂಗಳೂರಿಗೆ ಹೋಗಿ ಬರುವ ವಾಹನಗಳಿಗೆ ಅಪಘಾತ ವಲಯ ಸೂಚನಾ ಪಲಕವಿಲ್ಲದೆ ಹಾಗೂ ರಸ್ತೆ ಉಬ್ಬುಗಳು ಇಲ್ಲದ ಕಾರಣ ಅಪಘಾತಗಳಿಗೆ ಈ ದಾರಿಯಾಗಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ನಿಯಮಗಳ ನಾಮಪಲಕ ಮತ್ತು ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

