ಶಿಕ್ಷಕನ ಬಂಧನಕ್ಕೆ ಆಗ್ರಹ
ಬಾಗೇಪಲ್ಲಿ: ವಿದ್ಯಾರ್ಥಿನಿಯೊಬ್ಬಳ ಮೇಲೆ ಅಚ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿರುವ ತಾಲೂಕಿನ ಚೇಳೂರು ಗ್ರಾಮದ ಕಿಶೋರ್ ಶಾಲೆಯ ಮುಖ್ಯ ಶಿಕ್ಷಕ ರಾಮಚಂದ್ರರನ್ನು ಬಂಧಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ತಾಲೂಕಿನ ಚೇಳೂರು ಗ್ರಾಮದ ಕಿಶೋರ್ ವಿದ್ಯಾಸಂಸ್ಥೆಗೆ ಬೀಗ ಜಡಿದು ಹೋರಾಟ ನಡೆಸಿದ ಪ್ರತಿಭಟನಾಕಾರರು, ಆರೋಪಿಯನ್ನು ಬಂಧಿಸಲು ಮತ್ತು ಸಂಬಂಧಪಟ್ಟ ಶಾಲೆಗೆ ನೀಡಿರುವ ಅನುಮತಿ ರದ್ದುಪಡಿಸುವಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ನಂತರ ಮಾತನಾಡಿದ ತಾಪಂ ಸದಸ್ಯ ಎಸ್.ವೈ. ವೆಂಕಟರವಣರೆಡ್ಡಿ, ಕಿಶೋರ್ ಶಾಲೆಯ ವ್ಯವಸ್ಥಾಪಕ ರಾಮಚಂದ್ರ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಆತ್ಯಾಚಾರಕ್ಕೆ ಪ್ರಯತ್ನ ನಡೆಸಿ ಪರಾರಿಯಾಗಿ 20 ದಿನಗಳು ಕಳೆದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಕಿಶೋರ್ ವಿದ್ಯಾಸಂಸ್ಥೆ ಸ್ಥಾಪನೆಯಾದಂದಿನಿಂದ ಇಂದಿನವರೆಗೂ ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯರ ಮೇಲೆ ಆತ್ಯಾಚಾರಕ್ಕೆ ಯತ್ನಿಸುವುದು, ಲೈಂಗಿಕ ಕಿರುಕುಳ ನೀಡುತ್ತಿರುವ 6 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ವಿಚಾರವಾಗಿ ಅನೇಕ ಸಲ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಶಾಲೆಗೆ ನೀಡಿರುವ ಮಾನ್ಯತೆ ರದ್ದುಪಡಿಸಬೇಕು ಹಾಗೂ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿರುವ ಆರೋಪಿಯನ್ನು ಪೊಲೀಸರು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಜಿತ್ ಪ್ರಸಾದ್ ಅವರಿಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅಜಿತ್ ಪ್ರಸಾದ್, ಶಾಲೆಯ ಆಡಳಿತ ಮಂಡಳಿಯನ್ನು ರದ್ದುಪಡಿಸಲು ಸರಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹಾಗೂ ಆರೋಪಿಯನ್ನು ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಜೆ.ಪಿ. ಚಂದ್ರಶೇಖರರೆಡ್ಡಿ, ಫಾತೀಮಾ, ಸುಧೀರ್ ರೆಡ್ಡಿ, ಕೆ.ಆರ್. ಸುಧಾ ಕರ್ ರೆಡ್ಡಿ, ರಮೇಶ್ ರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

