ಕಾಲು ಬಾಯಿ ಜ್ವರ: ಕಣ್ಣುಮುಚ್ಚಿ ಕುಳಿತ ಇಲಾಖೆ
ಬಂಗಾರಪೇಟೆ: ತಾಲೂಕಿನಲ್ಲಿ ಕಾಲು ಬಾಯಿ ಜ್ವರ ಕಾಣಿಸಿಕೊಂಡು ಈವರೆಗೆ ಐದು ಹಸುಗಳು ಮೃತಪಟ್ಟಿದ್ದರೂ ಪಶುಸಂಗೋಪನ ಇಲಾಖೆ ಮೌನವಹಿಸಿರುವುದು ರೈತರ ಕೆಂಗಣ್ಣಿಗೆ ಗುರಿಯಾಗಿದೆ.
ಇತ್ತೀಚಿಗೆ ಎಲ್ಲೆಡೆ ಹಸುಗಳಿಗೆ ಕಾಲು ಬಾಯಿ ಜ್ವರ ಹರಡಿರುವುದು ರೈತರನ್ನು ಆತಂಕಗೊಳ್ಳುವಂತೆ ಮಾಡಿದೆ. ಪಶುಸಂಗೋಪನಾ ಇಲಾಖೆಯ ಸಹಾಯಕ ನಿದೇರ್ಶಕ ಡಾ. ಜಗದೀಶ್ ತಾಪಂ ಪ್ರಭಾರ ಇಒ ಆಗಿ ಕೆಲಸ ಮಾಡುತ್ತಿದ್ದು ಮಾತೃ ಇಲಾಖೆಗಿಂತಲೂ ಇಒ ಹುದ್ದೆಗೆ ಹೆಚ್ಚಿನ ಒತ್ತುಕೊಡುತ್ತಿರುವುದರಿಂದ ಇಲಾಖೆಯಲ್ಲಿ ಹಲವು ಸಮಸ್ಯೆಗಳಿಗೆ ಮುಕ್ತಿ ಸಿಗದೆ ರೈತರ ಸಂಕಷ್ಟಕ್ಕೆ ಸಿಲುಕಿದ್ದಾರೆ. 5ಹಸುಗಳು ಮೃತಪಟ್ಟಿದ್ದರೂ ಪಶುಸಂಗೋಪನಾ ಇಲಾಖೆ ತಾಲೂಕಿನಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ.
ಈವರೆಗೂ ಜಿಲ್ಲಾದ್ಯಂತ ಕಾಲು ಬಾಯಿ ಜ್ವರಕ್ಕೆ ಮೃತಪಟ್ಟ ಹಸುಗಳ ಸಂಖ್ಯೆ 440ಕ್ಕೇರಿದೆ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ, ಆದರೆ ಇಲ್ಲಿನ ಸಹಾಯಕ ನಿರ್ದೇಶಕರಿಗೆ ಯಾವುದೇ ಹಸುಗಳು ಸತ್ತಿಲ್ಲ ಎಂದು ಸಮಜಾಯಿಸಿ ನೀಡುತ್ತಿದ್ದಾರೆ. ಸಹಾಯಕ ನಿರ್ದೇಶಕರು ಯಾವುದೇ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲನೆ ಮಾಡುತ್ತಿಲ್ಲ, ಈ ಜ್ವರ ನಿಯಂತ್ರಣಕ್ಕೆ ಮುಂಜಾಗೃತಿ ಕ್ರಮಗಳ ಬಗ್ಗೆ ರೈತರಿಗೆ ತಿಳುವಳಿಗೆ ನೀಡುತ್ತಿಲ್ಲ ಎಂಬ ಆರೋಪವಿದೆ. ಪ್ರತಿದಿನ ತಮ್ಮ ಹಸುಗಳನ್ನು ಆಸ್ಪತ್ರೆಗೆ ಕರೆ ತಂದರೂ ವೈದ್ಯರು ಸಿಗದೆ ವಾಪಸ್ ಹೋಗುವಂತಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಕಾಲು ಬಾಯಿ ಜ್ವರ ಇರುವುದರಿಂದ ನಿಯಂತ್ರಣಕ್ಕೆ ಬರುವವರೆಗೂ ವಾರದ ಸಂತೆಗಳನ್ನು ನಿಷೇಧಿಸಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರೂ ಪಟ್ಟಣದಲ್ಲಿ ಎಗ್ಗಿಲ್ಲದೆ ಜಾನುವಾರುಗಳ ಸಂತೆ ನಡೆಯುತ್ತಿದ್ದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.
ಪ್ರಭಾರ ಇಒ ಜಗದೀಶ್ರನ್ನು ಮಾತೃ ಇಲಾಖೆ ವಾಪಸ್ ಕಳುಹಿಸಿ ಜಾನುವಾರುಗಳನ್ನು ರಕ್ಷಿಸಬೇಕೆಂದು ತಾಪಂ ಅಧ್ಯಕ್ಷ ರೇಣುಕಾರವರು ಹಾಗೂ ಪಶುಸಂಗೋಪನೆ ಇಲಾಖೆ ಅಧೀನ ಕಾರ್ಯದರ್ಶಿಗಳೂ ಜಿಪಂ ಸಿಎಸ್ರವರಿಗೆ ಪತ್ರ ಬರೆದು ಒತ್ತಾಯಿಸಿದರೂ ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

