ಮೋದಿ ಅಲೆಯಲ್ಲಿ ಕಾಂಗ್ರೆಸ್ ಧೂಳೀಪಟ
ಕೋಲಾರ: ದೇಶದಲ್ಲಿ ನರೇಂದ್ರ ಮೋದಿ ಅಲೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ಆಪೇಕ್ಷಿಸಿರುವ ಅವರು ಭಾನುವಾರ ಬಿಜೆಪಿಯ ಅನೇಕ ಮುಖಂಡರು ಮತ್ತು ಕಾರ್ಯಕರ್ತರ ಮನೆಗಳಿಗೆ ತೆರಳಿ ಬೆಂಬಲ ಕೋರಿದರಲ್ಲದೆ, ಅ.9ರಂದು ನಡೆಯಲಿರುವ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ ತಿಳಿಸುವಂತೆ ಕೋರಿದ್ದಾರೆ.
ಪಕ್ಷದ ಪಿ.ಎಸ್. ಸತ್ಯನಾರಾಯಣರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸುವ ಬಯಕೆಯನ್ನು ಜನತೆ ಹೊಂದಿದ್ದಾರೆ ಎಂದರು.
ಪಕ್ಷ ಹಿಂದೆ ತಮಗೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಭರವಸೆ ನೀಡಿತ್ತು ಎಂದ ಅವರು, ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ದವಾಗಿರುವುದಾಗಿ ಘೋಷಿಸಿದರು.
ಒಮ್ಮತದ ಆಯ್ಕೆಗೆ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದ ನಾರಾಯಣಸ್ವಾಮಿ, ತಮ್ಮ ಮೇಲೆ ಯಾವುದೇ ಅಪವಾಧವಿಲ್ಲ, ಕ್ಷುಲ್ಲುಕ ರಾಜಕಾರಣ ನಾನು ಮಾಡಿಲ್ಲ, ಸೋಲು-ಗೆಲುವು ಎರಡನ್ನು ಆತ್ಮಸ್ಥೈರ್ಯದಿಂದ ಸ್ವೀಕರಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಹನುಮಪ್ಪ, ಪಿ.ಎಸ್. ಸತ್ಯನಾರಾಯಣರಾವ್, ನೀಲಿ ಜೈಶಂಕರ್, ಓಂಶಕ್ತಿ ಚಲಪತಿ, ಜಯಂತಿಲಾಲ್, ವಕೀಲ ಸುಬ್ರಮಣಿ, ಸಾಹುಕಾರ್ ಶಂಕರಪ್ಪ, ಸಾ.ಮಾ. ಬಾಬು, ಪ್ರಮೋದ್, ಕೆಜಿಎಫ್ನ ಮುರಳೀಧರರಾವ್, ವಕೀಲ ನರಸಿಂಹಮೂರ್ತಿ, ಜಮೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

