ಕೋಲಾರ

ಕಚೇರಿಗೆ ಬೀಗ ಜಡಿದು ಪ್ರತಿಭಟನೆ

Published On :

ಬಂಗಾರಪೇಟೆ: ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳ ಮೌನಕ್ಕೆ ಶರಣಾಗಿರುವುದನ್ನು ಖಂಡಿಸಿ ದಲಿತ ಸಿಂಹ ಸೇನೆ ಮುಖಂಡರು ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಕೋಲಾರ ಕೆಜಿಎಫ್ ಮುಖ್ಯರಸ್ತೆ ಉದ್ದಕ್ಕೂ ಹಳ್ಳಕೊಳ್ಳಗಳಿಂದ ತುಂಬಿದ್ದು, ಈ ರಸ್ತೆಯೂ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರೂ ಕಳೆದ ಬಿಜೆಪಿ ಸರ್ಕಾರದಲ್ಲಿ ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದಾಗಿ ರಸ್ತೆ ದುರಸ್ತಿಗೊಂಡ ಮೂರು ತಿಂಗಳಲ್ಲೇ ಮತ್ತೆ ಹದಗೆಟ್ಟು ವಾಹನಗಳ ಓಡಾಟಕ್ಕೆ ಅನಾನುಕೂಲವಾಗಿದೆ. ಈ ಬಗ್ಗೆ ಹಲವು ಬಾರಿ ಸಂಘಟನೆ ಪ್ರತಿಭಟನೆ ಮಾಡಿ ರಸ್ತೆ ಮಧ್ಯ ನಿರ್ಮಾಣವಾಗಿರುವ ಹಳ್ಳಗಳನ್ನು ಮುಚ್ಚುವಂತೆ ಒತ್ತಾಯಿಸಿದ್ದರೂ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸಿದರು.
ಆದ್ದರಿಂದ ಈ ಬಾರಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿ ಮಾಡದಿದ್ದರೆ ಬಿಡುವುದಿಲ್ಲ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್ ಅಧಿಕಾರಿಗಳನ್ನು ಕಚೇರಿಯೊಳಗೆ ಕೂಡಿ ಹಾಕಿ ಬೀಗ ಹಾಕಿ ಪ್ರತಿಭಟನೆ ಮಾಡಿದರು.
ನಂತರ ಅಧಿಕಾರಿಗಳು ಬಂದು ರಸ್ತೆ ಮಧ್ಯ ಸೃಷ್ಟಿಯಾಗಿರುವ ಗುಂಡಿಗಳನ್ನು ಮುಚ್ಚುವ ಕೆಲಸ ಮೂರು ದಿನದೊಳಗಾಗಿ ಆರಂಭಿಸುವುದಾಗಿ ಭರವಸೆ ನೀಡಿದರೂ, ಸುಳ್ಳು ಆಶ್ವಾಸನೆಗಳಿಗೆ ನಾವು ಬಗ್ಗುವುದಿಲ್ಲ. ಭರವಸೆಗಳನ್ನು ಈಡೇರಿಸಿ ನಂತರ ಬನ್ನಿ ಎಂದು ಪಟ್ಟುಹಿಡಿದರು. ಬಳಿಕ ಕೊನೆ ಕಾಲಾವಕಾಶ ನೀಡಿ ಪ್ರತಿಭಟನೆ ವಾಪಸ್ ಪಡೆದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್, ತಾಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಪಿಳ್ಳಪ್ಪ, ಅಯ್ಯಪ್ಪ, ಹನುಮಪ್ಪ, ಗೋವಿಂದಪ್ಪ, ಮುನಿಸ್ವಾಮಿ, ಮಂಜುಳ, ರಾಧ, ಕುಪೇಂದ್ರ, ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.