ಏಕರೂಪ ಶಿಕ್ಷಣ ಜಾರಿಗೆ ಆಗ್ರಹ
ಕೋಲಾರ: ದೇಶದಲ್ಲಿ ಏಕರೂಪದ ಶಿಕ್ಷಣ ಹಾಗೂ ಸಮಾನ ಶಾಲೆಯ ವ್ಯವಸ್ಥೆ ಜಾರಿಗೊಳಿಸಬೇಕೆಂದು ಆಂಧ್ರಪ್ರದೇಶದ ಶಿಕ್ಷಣ ಉಳಿಸಿ ಜನಾಂದೋಲನ ಸಮಿತಿಯ ಸಂಚಾಲಕ ಡಾ. ಚಂದ್ರಶೇಖರ್ ಆಜಾದ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಕರ್ನಾಟಕ ಜನ ಶಕ್ತಿ ಮತ್ತು ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿ, ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಅಸಮಾನತೆ ಕಾಣುತ್ತಿರುವುದರಿಂದ ಕೇಂದ್ರ ಸರ್ಕಾರ ಏಕರೂಪ ಶಿಕ್ಷಣ ಮತ್ತು ಸಮಾನ ಶಾಲೆಯನ್ನು ಅನುಷ್ಟಾನಕ್ಕೆ ತರಬೇಕೆಂದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಾರ್ವತ್ರಿಕ ಉಚಿತ ಶಿಕ್ಷಣದ ಧ್ವನಿ ಪ್ರಬಲಗೊಂಡಿತು. ಡಾ. ಬಿ.ಆರ್.ಅಂಬೇಡ್ಕರ್ ಪ್ರಾಥಮಿಕ ಶಿಕ್ಷಣ ಹಕ್ಕು ಆಗಬೇಕೆಂದು ಪಟ್ಟು ಹಿಡಿದಿದ್ದರು. ಸ್ವಾತಂತ್ರ್ಯ ಬಂದ ಆರೂವರೆ ದಶಕಗಳ ನಂತರ ಈಗ ಶಿಕ್ಷಣ ಒಂದು ಹಕ್ಕಾಗಿ ಜಾರಿಗೆ ಬಂದಿದೆ ಎಂದರು.
ಸಮಾನ ಹಾಗೂ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಗೆ ತರಬೇಕೆಂದು ಕೊಟಾರಿ ಆಯೋಗ ಶಿಫಾರಸು ಮಾಡಿದೆ.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏಕರೂಪದ ಶಿಕ್ಷಣ ನೀಡುವುದು ಇದರ ಉದ್ದೇಶ. ಆದರೆ ಬಹುತೇಕ ರಾಜ್ಯಗಳು ಈ ಬಗ್ಗೆ ಮಾತನಾಡುತ್ತಿಲ್ಲ ಎಂದರು.
ಹಿರಿಯ ದಸಂಸ ಮುಖಂಡ ಎನ್.ವೆಂಕಟೇಶ್ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಸರ್ಕಾರದ ನೇರ ಹೊಣೆಗಾರಿಕೆಯಲ್ಲೇ ನಡೆಯುವ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಅದನ್ನು ದುರ್ಬಲಗೊಳಿಸುವ ನೀತಿ ಹಾಗೂ ಕ್ರಮಗಳ ವಿರುದ್ಧ ಹೋರಾಡಬೇಕು ಎಂದರು.
ದಸಂಸ ರಾಜ್ಯ ಸಂಚಾಲಕ ಕೆ.ಸಿ.ರಾಜಾಕಾಂತ್, ಜಿಲ್ಲಾ ಸಂಘಟನಾ ಸಂಚಾಲಕ ಹಾರೋಹಳ್ಳಿ ರವಿ, ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕ ಡಾ. ನಾಗರಾಜ್, ವಕೀಲ ಹೊಸಹಳ್ಳಿ ರಾಮಕೃಷ್ಣ ಇದ್ದರು. ಕರ್ನಾಟಕ ಜನಶಕ್ತಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜಯ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

