ಕೋಲಾರ

ಸಾಂಬಾರ್ ಪಾತ್ರೆಗೆ ಬಿದ್ದ ಮಗು ಸಾವು

Published On :

ಕನ್ನಡಪ್ರಭ ವಾರ್ತೆ, ಮಾಲೂರು, ಆ.7
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಲಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸೆ.27ರಂದು ಅಡುಗೆ ಸಹಾಯಕಿ ನಿರ್ಲಕ್ಷ್ಯದಿಂದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸುಟ್ಟಗಾಯಗಳಿಂದ ಆಸ್ಪತ್ರೆ ಸೇರಿದ್ದ ಆಕೆಯ 3 ವರ್ಷದ ಮನೋಜ್ ಎಂಬ ಮಗು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಸಾವನ್ನಪ್ಪಿದೆ.
ತಾಲೂಕಿನ ಬ್ಯಾಲಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಂಜುಳ ತನ್ನ ಮಗು ಮನೋಜ್ನನ್ನು ಜೊತೆಯಲ್ಲಿ ಕರೆ ತಂದು ಕೆಲಸ ಮಾಡುತ್ತಿದ್ದು, ಆಕಸ್ಮಿಕವಾಗಿ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದಿತ್ತು.
ಇದರಿಂದ ಶೇ.80ರಷ್ಟು ಸುಟ್ಟಗಾಯಗಳಿಂದ ಆಸ್ಪತ್ರೆ ಸೇರಿದ್ದ ಮನೋಜ್ನಿಗೆ ರಾಜ್ಯ ಸರ್ಕಾರವು ಚಿಕಿತ್ಸೆಯ ಸಂಪೂರ್ಣ ಖರ್ಚು ಭರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಸ್ಥಳೀಯ ಶಾಸಕ ಮಂಜುನಾಥ್ ಗೌಡ ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಪೋಷಕರಿಗೆ ಸ್ವಾಂತನ ಹೇಳಿದ್ದರು. ಆದರೆ ಕಳೆದ ಹತ್ತು ದಿನಗಳ ನಂತರ ಚಿಕಿತ್ಸೆಗೆ ಸ್ವಂದಿಸದೆ ಮಗು ಸಾವನ್ನಪ್ಪಿದೆ. ಈಗಾಗಲೇ ಅಂಗವೈಕಲ್ಯದಿಂದ ಬಳಲುತ್ತಿರುವ ಪತಿಯಿಂದ ಸಂಸಾರ ನೊಗ ಹಿಡಿದಿರುವ ವಿದ್ಯಾವಂತೆ ಮಂಜುಳಾಗೆ ಇದ್ದ ಒಬ್ಬ ಗಂಡು ಮಗು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರದಿಂದ ಆಕೆಯ ಕುಟುಂಬದ ನಿರ್ವಹಣೆಗೆ ಸೂಕ್ತ ವ್ಯವಸ್ಥೆಯಾಗಬೇಕಾಗಿದೆ ಎನ್ನುತ್ತಾರೆ ಗ್ರಾಮಸ್ಥರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.