ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಬಾಗೇಪಲ್ಲಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ನ್ಯಾಷನಲ್ ಕಾಲೇಜ್ ಮುಂಭಾಗದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಬಂದ ನೂರಾರು ವಿದ್ಯಾರ್ಥಿಗಳು ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ತಾಲೂಕು ಸಮಿತಿಯ ಅಧ್ಯಕ್ಷ ಎಸ್. ರಾಜಶೇಖರ್, ರಾಜ್ಯದ 50 ರಷ್ಟು ವಿದ್ಯಾರ್ಥಿಗಳು ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ವಿ.ವಿ. ನಿಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಇದುವರೆಗೂ ಪಠ್ಯ ಪುಸ್ತಕಗಳನ್ನು ತಲುಪಿಸಿಲ್ಲ, ಮೌಲ್ಯಮಾಪನದಲ್ಲಿ ಲೋಪದೋಷಗಳು ಹಾಗೂ ಅಂಕಪಟ್ಟಿಗಳ ವಿಳಂಬದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಾರಿಗೆ ಸೌಲಭ್ಯ ಒದಗಿಸಬೇಕು, ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿ ನಡೆಯುತ್ತಿರುವ ಹಲವಾರು ಲೋಪದೋಷಗಳನ್ನು ಸರಿಪಡಿಸಬೇಕು, 2013-14ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ತಕ್ಷಣ ಪಠ್ಯಪುಸ್ತಕಗಳನ್ನು ಒದಗಿಸಬೇಕು, ಈ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು.
ಈ ಸಂಬಂಧ ತಹಸೀಲ್ದಾರ್ ಎಂ.ಎ. ಪಧ್ಮ ರವರಿಗೆ ಮನವಿ ಸಲ್ಲಿಸಿದರು. ಎಸ್ಎಫ್ಐನ ನರಸಿಂಹಮೂರ್ತಿ, ರಾಘವೇಂದ್ರ ರೆಡ್ಡಿ, ಅಭಿಲಾಷ್, ಅಜಯ್, ಶ್ರೀನಾಥ್, ನರೇಂದ್ರ, ನರಸಿಂಹಮೂರ್ತಿ, ವೇಣುಗೋಪಾಲ್, ನರೇಶ್, ನಾಗೇಶ್, ಕಾವ್ಯ, ಚೈತ್ರ, ಪ್ರೇಮ, ಅಂಜಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

