ಶೀಘ್ರ ಪಡಿತರ ಚೀಟಿ ವಿತರಣೆಗೆ ಸೂಚನೆ
ಶಿಡ್ಲಘಟ್ಟ: ಸರ್ಕಾರದ ಮಹತ್ವ ಯೋಜನೆಯಾದ ಅನ್ನ ಭಾಗ್ಯ ಯೋಜನೆ ಬಡವರಿಗೆ ಸಿಗಬೇಕೆಂಬ ಉದ್ದೇಶದಿಂದ ಪಡಿತರ ಚೀಟಿಗಾಗಿ ಅನ್ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ನವೆಂಬರ್ ಒಳಗೆ ಪಡಿತರ ಚೀಟಿ ವಿತರಣೆ ಮಾಡಬೇಕೆಂದು ಸರ್ಕಾರದ ಆದೇಶವಾಗಿದೆ ಎಂದು ಆಹಾರ ಉಪನಿರ್ದೇಶಕ ಶ್ರೀನಿವಾಸಯ್ಯ ತಿಳಿಸಿದರು.
ಬೆಳ್ಳೊಟಿ ಕಲ್ಯಾಣ ಮಂಟಪದಲ್ಲಿ ಪಿಡಿಒ, ಗ್ರಾಪಂ ಕಾರ್ಯದರ್ಶಿ ಸೇರಿದಂತೆ ಆಹಾರ ಇಲಾಖೆಯ ಎಲ್ಲ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಅನ್ ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಅಕ್ಟೋಬರ್ ಒಳಗೆ ತಪಾಸಣೆ ಮಾಡಿ ವರದಿ ಸಲ್ಲಿಸಬೇಕೆಂದು, ನವೆಂಬರ್ ಒಳಗೆ ಪಡಿತರ ಚೀಟಿಗಳನ್ನು ವಿತರಣೆ ಮಾಡಬೇಕಾಗಿ ಸರ್ಕಾರದ ಆದೇಶವಾಗಿರುವುದರಿಂದ ಬೇಗ ವರದಿ ಸಲ್ಲಿಸಬೇಕಾಗಿದೆ ಎಂದು ತಿಳಿಸಿದರು. ಅನ್ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಲು ಎಫ್ಎಲ್ಒಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. 27 ಗ್ರಾಪಂಗಳಿಗೆ ಪಿಡಿಒ, ಗ್ರಾಪಂ ಕಾರ್ಯದರ್ಶಿ, ಗ್ರಾಮ ಲೆಕ್ಕಿಗರು ಹಾಗೂ ಪಟ್ಟಣದಲ್ಲಿ ಪುರಸಭೆಯ ಆರ್ಐ ಹಾಗೂ ಬಿಲ್ ಕಲೆಕ್ಟರ್ಗಳು ಎಫ್ಎಲ್ಒಗಳಾಗಿ ಕಾರ್ಯ ನಿರ್ವಹಿಸುತ್ತಾರೆಂದರು.
ಅರ್ಜಿದಾರರ ಮನೆಗೆ ಭೇಟಿ ನೀಡಿ ಮಾಹಿತಿ ಮೇರೆಗೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ಗೆ ಅರ್ಹ ಎಂದು ನಿರ್ಧರಿಸಿ ಪಡಿತರ ಚೀಟಿ ವಿತರಸಿಲಾಗುವುದು ಎಂದರು.
ಬಹತೇಕ ಅಧಿಕಾರಿಗಳು ಹಾಜರಾಗದೆ ಕುರ್ಚಿಗಳು ಖಾಲಿಯಾಗಿತ್ತು. ತಹಸೀಲ್ದಾರ್ ನಾರಾಯಣಸ್ವಾಮಿ, ಪುರಸಭೆಯ ಮುಖ್ಯಾಧಿಕಾರಿ ಚೆನ್ನರಾಯಪ್ಪ, ಬಸಪ್ಪ, ಶಿರಸ್ತೆದಾರ್ ರಂಗನಾಥ್, ಪ್ರಕಾಶ್, ಶ್ರೀಧರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

