ಕೋಲಾರ

ಅಲೆಮಾರಿ ಬುಡಕಟ್ಟು ಜನಾಂಗದ ಪ್ರತಿಭಟನೆ

Published On :

ಚಿಕ್ಕಬಳ್ಳಾಪುರ: ಎಲ್ಲಾ ರಂಗಗಳಲ್ಲೂ ಹಿಂದುಳಿದಿರುವ ಅಲೆಮಾರಿ ಬುಡಕಟ್ಟು ಜನಾಂಗದವರ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಲೆಮಾರಿ ಬುಡಕಟ್ಟು ಮಹಾಸಭಾ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಶಿಡ್ಲಘಟ್ಟ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಕುಳಿತು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಬಾಲಗುರು ಮೂರ್ತಿ ಮಾತನಾಡಿ, ಹಿಂದಿನಿಂದಲೂ ಅಲೆಮಾರಿ ಬುಡಕಟ್ಟು ಜನಾಂಗದವರು ಎಲ್ಲಾ ರೀತಿಯಲ್ಲೂ ಹಿಂದುಳಿದಿದ್ದಾರೆ. ಸಮರ್ಪಕವಾಗಿ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಅಪ್ರಸ್ತುತ ನಿಯಮಗಳಿಗೆ ಅಡ್ಡಿಯಾಗಿದೆ. ಇಂದಿಗೂ ಹಳೇಯ 1965 ರ ಬುಡುಕಟ್ಟು ಜನಾಂಗದ ಜಾತಿಯ ಪಟ್ಟಿಯನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದು ಇದರಿಂದ ಕೆಲ ಜಾತಿಗಳಿಗೆ ಮಾತ್ರ ಸವಲತ್ತುಗಳು ಹೆಚ್ಚಿಗೆ ಸಿಗುತ್ತಿವೆ. ಅನುದಾನದ ಬಳಕೆಯಲ್ಲೂ ಸಮಸ್ಯೆಗಳು ಉಂಟಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಬುಡಕಟ್ಟು ಜನಾಂಗದವರ ಪಟ್ಟಿಯನ್ನು ತಯಾರು ಮಾಡಿ ಅರ್ಹ ಜಾತಿಗಳನ್ನು ಗುರುತಿಸಬೇಕು. ಬುಡಕಟ್ಟು ಜನಾಂಗದವರ ಹಿತ ರಕ್ಷಣೆಗಾಗಿ ಪ್ರತ್ಯೇಕ ನಿಗಮವನ್ನು ರಚಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ವಿಶಾಲ್ ಮನವಿ ಸ್ವೀಕರಿಸಿ, ಅಲೆಮಾರಿ ಬುಡಕಟ್ಟು ಜನಾಂಗದವರ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯುವುದಲ್ಲದೇ ಜಿಲ್ಲಾಡಳಿತದ ವತಿಯಿಂದ ಅಗತ್ಯವಿರುವ ಸವಲತ್ತುಗಳನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಗೋವಿಂದಸ್ವಾಮಿ, ಜಿಲ್ಲಾಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಸಂಚಾಲಕ ಕುಳ್ಳಾಯಪ್ಪ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.