ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ಮಾಲೂರು: 18 ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಂಜುನಾಥ್ ಗೌಡ ಹೇಳಿದರು. ತಹಸೀಲ್ದಾರ್ ಕಚೇರಿಯಲ್ಲಿ ಕೆರದಿದ್ದ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ಆಯೋಜಿಸಲಾಗುವುದು ಎಂದು ಶಾಸಕರು ತಿಳಿಸಿರು. ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಕಾರ್ಯದರ್ಶಿ ವೆಂಕಟರಾಮ್ ಮಾತನಾಡಿ, ಹಿಂದೆ ವಾಲ್ಮೀಕಿ ಭವನಕ್ಕಾಗಿ ರು. 1 ಕೋಟಿ ಸರ್ಕಾರದಿಂದ ಮಂಜೂರಾಗಿದ್ದು, ಅದರ ಪ್ರಥಮ ಹಂತವಾಗಿ ರು. 25 ಲಕ್ಷ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಅವಶ್ಯವಾಗಿರುವ ನಿವೇಶನ ಮಂಜೂರು ಮಾಡಿ ವಾಲ್ಮೀಕಿ ಜಯಂತಿಯಂದು ಭವನದ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಅಗ್ರಹಿಸಿದರು. ಗುಂಡಪ್ಪ, ನಾರಾಯಣಪ್ಪ ಮಾತನಾಡಿದರು. ಸಲಹೆ ಸ್ವೀಕರಿಸಿ ಮಾತನಾಡಿದ ಶಾಸಕ ಮಂಜುನಾಥ್ ಗೌಡ, ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲು 12 ಜನರ ಸಮಿತಿ ರಚಿಸಿ ಉಸ್ತುವಾರಿ ನೀಡಲಾಗುವುದು ಎಂದರು.
ರಾಜ್ಯೋತ್ಸವ ಸಭೆ ಮುಂದೂಡಿಕೆ
ಮಾಲೂರು: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯೂಂದಿಗೆ ನಡೆಯಬೇಕಿದ್ದ ಕನ್ನಡ ರಾಜ್ಯೋತ್ಸ ಪೂರ್ವಭಾವಿ ಸಭೆ ಬಹುತೇಕ ಕನ್ನಡ ಸಂಘಟನೆಗಳ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಮುಂದೂಡುವಂತೆ ಶಾಸಕ ಮಂಜುನಾಥ್ ಗೌಡರು ಆದೇಶಿಸಿದರು. ಎಲ್ಲ ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕನ್ನಡ ಹಬ್ಬ ಆಚರಿಸಬೇಕಾಗಿರುವುದರಿಂದ ಪೂರ್ವಭಾವಿ ಸಭೆಯನ್ನು 12 ರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗುವುದು. ಎಲ್ಲ ಸಂಘಟನೆಗಳ ಪದಾಧಿಕಾರಿಗಳು ತಪ್ಪದೆ ಹಾಜರಾಗಬೇಕೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

