ಕೋಲಾರ

ಪಡಿತರ ಅಕ್ಕಿ ವಶ; ವ್ಯಕ್ತಿ ಬಂಧನ

Published On :

ಚಿಂತಾಮಣಿ: ಅಕ್ರಮವಾಗಿ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ 40 ಮೂಟೆ ಅಕ್ಕಿ ಮತ್ತು ವಾಹನ ವಶಪಡಿಸಿಕೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ಪಟ್ಟಣದ ಎಪಿಎಂಸಿ ಮಾರ್ಕೆಟ್ನಲ್ಲಿ ನಡೆದಿದೆ.
ಘಟನೆ ವಿವರ: ಪಟ್ಟಣದ ಶ್ರೀರಾಮ ನಗರದ ನಿವಾಸಿ ಮುನಿಯಪ್ಪ ಎಂಬಾತ ತನ್ನ ಸರಕು ಸಾಗಾಣಿಕೆ ವಾಹನದಲ್ಲಿ ಪಡಿತರ ಚೀಟಿದಾರರಿಗೆ ವಿತರಿಸುವ ಸೊಣ್ಣಶೆಟ್ಟಹಳ್ಳಿ ಬಳಿಯ ಪಡಿತರ ಚೀಟಿದಾರರಿಗೆ ವಿತರಿಸುವ ಅಕ್ಕಿಯನ್ನು ವಿತರಿಸದೆ ಮಾರಾಟ ಮಾಡಲು ತಂದಿದ್ದ ಸಂದರ್ಭದಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಸಬ್ಇನ್ಸ್ಪೆಕ್ಟರ್ ಮುರಳಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯವನ್ನು ಬಾಯಿ ಬಿಟ್ಟಿರುವುದಾಗಿ ತಿಳಿಸಿದ್ದಾರೆ. ಅರೋಪಿ ಮುನಿಯಪ್ಪನನ್ನು ಬಂಧಿಸಿ ಮಾಲು ಸಮೇತ ಆಟೋವನ್ನು ವಶಪಡಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅರೂರು ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರ
ಚಿಕ್ಕಬಳ್ಳಾಪುರ: ಗ್ರಾಮಸ್ಥರಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ ಎಂದು ಶಾಸಕ ಡಾ. ಕೆ. ಸುಧಾಕರ್ ತಿಳಿಸಿದರು. ತಾಲೂಕಿನ ಪೆರೇಸಂದ್ರ ಸಮೀಪದ ಅರೂರು ಗ್ರಾಮದಲ್ಲಿ ನಡೆದ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಶಿಬಿರಗಳು ನಡೆಯುವುದು ಶ್ಲಾಘನೀಯ. ಯುವ ಸಮುದಾಯ ಈ ರೀತಿಯ ಸೇವಾ ಕಾರ್ಯದಲ್ಲಿ ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ಸಮಾಜದ ಅಭಿವೃದ್ಧಿ ಜತೆಗೆ ಸೇವಾ ಮನೋಭಾವ ಹೆಚ್ಚುತ್ತದೆ. ಎಲ್ಲದರ ಜತೆ ರಾಜ್ಯವನ್ನು ಉತ್ತಮ ಪ್ರಗತಿಯತ್ತ ಕೊಂಡೊಯ್ಯುವ ಕನಸು ನನಸಾಗುತ್ತದೆ ಎಂದರು. ಜಿ.ಪಂ. ಮಾಜಿ ಸದಸ್ಯ ಪಿ.ಎನ್. ಕೇಶವರೆಡ್ಡಿ, ರಾದ ಚನ್ನಕೇಶವರೆಡ್ಡಿ, ಆನಂದ್, ಶ್ರೀಧರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.