ನೀರಿನ ಶುದ್ಧೀಕರಣ ಘಟಕಕ್ಕೆ ಚಾಲನೆ
ಟೇಕಲ್: ಅಂತರ್ಜಲ ಮಟ್ಟ ಕುಸಿದಿರುವ ಹಿನ್ನಲೆಯಲ್ಲಿ ಫ್ಲೋರೈಡ್ ಅಂಶ ತಡೆಗಟ್ಟಲು ತಾಲೂಕಿನಲ್ಲಿ ಹೆಚ್ಚು ಫ್ಲೋರೈಡ್ ಇರುವ ಕೊಳವೆ ಬಾವಿಗಳ ನೀರನ್ನು ಪರೀಕ್ಷಿಸಿ ನೀರಿನ ಶುದ್ಧೀಕರಣ ಘಟಕ ಸ್ಥಾಪಿಸಲಾಗುತ್ತದೆ ಎಂದು ಶಾಸಕ ಮಂಜುನಾಥಗೌಡ ತಿಳಿಸಿದರು. ಟೇಕಲ್ ಹುಣಸಿಕೋಟೆಯಲ್ಲಿ ಶುದ್ಧೀಕರಣ ಘಟಕಕ್ಕೆ ಚಾಲನೆ ನೀಡಿ ಮಾತನಾಡಿ, ತಾಲೂಕಿನ 28 ಗ್ರಾಪಂಗಳ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ ಕಂಡು ಬರುತ್ತಿದ್ದು ಅಂತಹ ಸ್ಥಳಗಳಲ್ಲಿ ಶುದ್ಧೀಕರಣ ಘಟಕಗಳು ತೆಗೆದರೆ ಉತ್ತಮ ಕುಡಿಯುವ ನೀರನ್ನು ಕೊಡಲು ಸಾಧ್ಯವಾಗುತ್ತದೆ ಎಂದರು. ಕೆ.ವೈ. ನಂಜೇಗೌಡ ಮಾತನಾಡಿದರು. ಜಿಪಂ ಕಾರ್ಯನಿರ್ವಹಣಾಧಿಕಾರಿ ಬದ್ರಿನಾಥ್, ಪಿ.ಆರ್. ದೇವರಾಜ್, ಹನುಮಂತಪ್ಪ, ಕೆ.ಜಿ. ಹಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ ರಮೇಶ್, ಉಪಾಧ್ಯಕ್ಷೆ ಅಲುಮೇಲುಮಂಗಮ್ಮ, ಬಿ.ಜಿ. ಮುನಿಶಾಮಿಗೌಡ, ಮಿಟ್ಟಿಗಾನಹಳ್ಳಿ ರಾಮಕೃಷ್ಣಪ್ಪ, ಅನಿಗಾನಹಳ್ಳಿ ಬೈರೇಗೌಡ, ಪೆಡವನಹಳ್ಳೀ ನಂಜಪ್ಪ ಇದ್ದರು.
ಪದಾಧಿಕಾರಿಗಳ ನೇಮಕ
ಚಿಕ್ಕಬಳ್ಳಾಪುರ: ಜಿಲ್ಲಾ ಮತ್ತು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಂ. ಚಲಪತಿಗೌಡ ತಿಳಿಸಿದ್ದಾರೆ. ಜಿಲ್ಲಾ ಗೌರವಾಧ್ಯಕ್ಷ ಎಂ.ಆರ್. ನಾಗರಾಜ್ ರಾವ್, ಉಪಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಸಿ.ಎಸ್.ನಾಗರಾಜ್, ಖಜಾಂಚಿ ಎಂ.ಶ್ರೀನಿವಾಸ್, ಜಂಟಿ ಕಾರ್ಯದರ್ಶಿಗಳಾಗಿ ಎಸ್.ಕೆ. ಆದಿನಾರಾಯಣ, ಸೋ.ಸು.ನಾಗೇಂದ್ರನಾಥ್, ಸಂಘಟನಾ ಕಾರ್ಯದರ್ಶಿಗಳಾಗಿ ಹೆಚ್. ನಾಗಭೂಷಣ್ ರೆಡ್ಡಿ, ಸುಶೀಲಾ ಮತ್ತು ಕನ್ನಡಪರ ಸಂಘಟನೆಗಳ ಪ್ರತಿನಿಧಿಯಾಗಿ ಎಸ್. ಜಯಂತ್ಕುಮಾರ್, ಮಾಧ್ಯಮ ವಕ್ತಾರನ್ನಾಗಿ ಎಂ. ಮುನಿಕೃಷ್ಣ ಮತ್ತು ತಾಲೂಕು ಗೌರಾವಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಅಧ್ಯಕ್ಷ ಗೋವಿಂದರಾಜು, ಉಪಾಧ್ಯಕ್ಷ ವರದರಾಜು, ಪ್ರಧಾನ ಕಾರ್ಯದರ್ಶಿ ಸದಾಶಿವ, ಖಜಾಂಚಿ ಜಯಮ್ಮ, ಜಂಟಿ ಕಾರ್ಯದರ್ಶಿಗಳಾಗಿ ರಮಣ್ ಅಕೇಶ್, ಶ್ರೀನಾಥ್, ಸಂಘಟನಾ ಕಾರ್ಯದರ್ಶಿ ಸೌಭಾಗ್ಯ, ಅಶ್ವತ್ಥನಾರಾಯಣ, ಗೌರವ ಸದಸ್ಯರಾಗಿ ವಿನೋದ್, ಲತಾ, ಸರಸಮ್ಮ, ವೆಂಕಟೇಶ್, ಸಂಚಾಲಕರಾಗಿ ಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.
ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಕರ ಕುಶಲ ಕರ್ಮಿಗಳಿಗೆ ಉಪಕರಣಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಲಾಗುವುದು. ಆಸಕ್ತರು ಅ.26 ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

