ಮೌಲ್ಯಮಾಪನ ದೋಷ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಚಿಂತಾಮಣಿ: ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿ ಮೌಲ್ಯಮಾಪನ ದೋಷಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ತಾಲೂಕು ಶಾಖೆ ಸಂಘಟನೆಯ ವತಿಯಿಂದ ಆಗ್ರಹಿಸಿ ಶುಕ್ರವಾರ ನೂರಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಅಂತಿಮ ಮಹಿಳಾ ಪದವಿ ಕಾಲೇಜು ವಿದ್ಯಾರ್ಥಿಗಳು ರಾಜ್ಯಾದ್ಯಂತ ಎಬಿವಿಪಿ ಸಂಘಟನೆಯು ಎಲ್ಲಾ ಕಾಲೇಜುಗಳನ್ನು ಬಂದ್ ಮಾಡಿ ಪರೀಕ್ಷಾಂಕ ಲೋಪದೋಷಗಳನ್ನು ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರೆ ನೀಡಿದ ಮುಷ್ಕರಕ್ಕೆ ಬೆಂಬಲಿಸಿ ಇಲ್ಲಿನ ವಿದ್ಯಾರ್ಥಿ ಸಂಘಟನೆಯೊಂದಿಗೆ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿನ ಸಮಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿ ಪ್ರಮುಖ ಬೇಡಿಕೆಗಳಾದ 4 ನೇ ಸೆಮಿಸ್ಟರ್ ಪದವಿ ಫಲಿತಾಂಶದಲ್ಲಿ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೂ ಗೈರು ಹಾಜರಾತಿ ನೀಡಲಾಗಿದೆ. ಅಲ್ಲದೆ ಪರೀಕ್ಷೆ ಬರೆಯದವರಿಗೆ ಶೇ.70 ರಷ್ಟು ಅಂಕ ನಮೂದಿಸಲಾಗಿದೆಯೆಂದು ಆರೋಪಿಸಿ ಶಿಕ್ಷಣ ವ್ಯವಸ್ಥೆ ಬಗ್ಗೆ ಸರ್ಕಾರ ಕೂಡಲೇ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡಲು ನಿರ್ಲಕ್ಷ್ಯ ತೋರುತ್ತಿರುವುದು ಸರಿಯಿಲ್ಲವೆಂದು ಧರಣಿ ನಡೆಸಿದರು.
ಈ ಕೂಡಲೇ ವಿ.ವಿ ಪುನರ್ ಮೌಲ್ಯಮಾಪನ ನಡೆಸಬೇಕು, ಮೌಲ್ಯಮಾಪನ ದೋಷಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಈ ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಸಂಘಟನೆಯ ಮುಖಂಡರಾದ ಮಂಜುನಾಥರೆಡ್ಡಿ, ಸುರೇಶ್, ನದೀಮ್, ಸೈಯದ್, ಭರತ್, ಲಕ್ಷ್ಮಣ್, ರಜನಿ, ಲಕ್ಷ್ಮಿ ಮತ್ತಿರರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

