ಕೃಷಿ ಉತ್ಪನ್ನ ಆಮದು: ದೇಶೀ ರೈತರಿಗೆ ತಣ್ಣೀರುಬಟ್ಟೆ
ಕೆಜಿಎಫ್: ಕೇಂದ್ರ ಸರ್ಕಾರ ದೇಶದಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನೇ ಹೊರ ದೇಶಗಳಿಂದ ಆಮದು ಮಾಡಿಕೊಳ್ಳುತ್ತಾ ನಮ್ಮ ದೇಶದ ರೈತ ಕುಲವನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದೆ. ಈಗಾಗಲೇ ಸಕ್ಕರೆ, ರೇಷ್ಮೆ, ಗೋಧಿ, ತಂಬಾಕು ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಗಲ್ಫ್ ದೇಶಗಳ ವ್ಯಾಮೋಹದಲ್ಲಿ ಮುಳುಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಶ್ರೀನಿವಾಸಗೌಡ ಆರೋಪಿಸಿದ್ದಾರೆ.
ಅದೇ ರೀತಿ ಕೃಷಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಗುಳೆ ಹೋಗುವುದನ್ನು ತಪ್ಪಿಸಲು ಹಸಿ ಬರ ಮತ್ತು ಒಣ ಬರವನ್ನು ನಿರ್ಮೂಲನೆ ಮಾಡಿ ಹಳ್ಳಿಗಳನ್ನು ಆರ್ಥಿಕವಾಗಿ ಸುಭದ್ರಪಡಿಸಲು ಬಯಲು ಸೀಮೆಯ ಕೃಷಿ ಪ್ರದೇಶದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚಿಸಲು ಹಾಗೂ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಶಿಸ್ತುಬದ್ಧ ಮರಳು ನೀತಿ ರೂಪಿಸಲು ಬಯಲುಸೀಮೆ ಜಿಲ್ಲೆಗಳಿಗೆ ಡಾ.ಪರಮಶಿವಯ್ಯನವರ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮತ್ತು ಗಾಂಧಿ ಕಂಡ ಗ್ರಾಮ ಸ್ವರಾಜ್ಯವನ್ನು ಮತ್ತೆ ಸ್ಥಾಪನೆ ಮಾಡಿ ಸಮಸ್ಥ ದುಡಿಯುವ ವರ್ಗದ ಜನ ಸ್ವಾಲಂಭನೆಯಿಂದ ಬದುಕು ರೂಪಿಸಿಕೊಳ್ಳುವ ಯೋಜನೆಗಳಿಗಾಗಿ ನಿರ್ಣಯಗಳನ್ನು ಜಾರಿಗೊಳಿಸಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಅ.28 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ರೈತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲಾದ್ಯಂತ ರೈತರು ಹಾಗೂ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಲು ಕರೆ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹುಲ್ಕೂರು ಹರಿಕುಮಾರ್ ಮಾತನಾಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳನ್ನು ಸಂರಕ್ಷಿಸಲು ಹಾಗೂ ಹೂಳೆತ್ತಲು ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು, ಕೆರೆಗಳ ಒತ್ತುವರಿ ತೆರವುಗೊಳಿಸಲು ಕಾನೂನು ರೀತ್ಯ ಕ್ರಮವನ್ನು ಜರುಗಿಸಬೇಕು, ಕೋಲಾರ ಜಿಲ್ಲೆಯ ನರಸಾಪುರ ಮತ್ತು ವೇಮಗಲ್ ಪ್ರದೇಶಗಳಲ್ಲಿ ಕೈಗಾರಿಕೆಯನ್ನು ಸ್ಥಾಪಿಸಲು ರೈತರಿಂದ ಭೂಮಿಯನ್ನು ಪಡೆದು ಉದ್ಯೋಗವಕಾಶ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಅಷ್ಟೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಾದ ಮಂಜುನಾಥ್, ವಿಶ್ವನಾಥ್, ಸುಬ್ರಮಣಿ, ವೆಂಕಟೇಶ್, ಉದಯ್, ರಾಘವೇಂದ್ರ, ಗಣೇಶ್, ಪ್ರತಾಪ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

