ನಿಷೇಧದ ನಡುವೆಯೂ ನಡೆಯುತ್ತಿರುವ ಜಾನುವಾರು ಮಾರಾಟ
ಕಪ್ರ ವಾರ್ತೆ ಬಂಗಾರಪೇಟೆ ಅ.11
ಜಿಲ್ಲಾದ್ಯಂತ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಕಾಣಿಸಿಕೊಂಡು ಹಸುಗಳು ಸಾಯುತ್ತಿರುವ ಹಿನ್ನೆಲಯಲ್ಲಿ ಜಿಲ್ಲಾಡಳಿತ ವಾರದ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರೂ ರಾಜರೋಷವಾಗಿ ಹಸುಗಳ ವ್ಯಾಪಾರ ನಡೆಯುತ್ತಿದೆ. ಅಧಿಕಾರಿಗಳು ಜಾಣ ಕುರುಡುತನದಿಂದ ವರ್ತಿಸುತ್ತಿದ್ದಾರೆ.
ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿದೆ. ಸಂತೆಗಳು ನಡೆದರೆ ರೋಗ ಮತ್ತಷ್ಟು ಹಸುಗಳಿಗೆ ತಗುಳಲಿದೆ ಎಂದು ವಾರದ ಸಂತೆಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ ರೈತರು ಕೋಲಾರ ಮುಖ್ಯರಸ್ತೆ ಜೈನ್ ಶಾಲೆ ರಸ್ತೆ ಮುಂದೆ ಖಸಾಯಿ ಖಾನೆಗೆ ಮಾರಾಟ ಮಾಡುತ್ತಿದ್ದಾರೆ.
ಸಂತೆಯಲ್ಲಿ ಇದಲ್ಲದೆ ಕುರಿ, ಕೋಳಿಗಳ ವಹಿವಾಟು ನಡೆಯುತ್ತಿದೆ. ಇದರಿಂದ ತಾಲೂಕು ಆಡಳಿತ ಏನು ಮಾಡುತ್ತಿದೆ ಎಂಬ ಪ್ರಶ್ನೆ ಮೂಡಿದೆ. ಪೊಲೀಸರು ಕಳೆದ ವಾರ ಸ್ಥಳಕ್ಕೆ ಬಂದು ಜಾನುವಾರುಗಳ ವಾಹಿವಾಟು ನಡೆಯದಂತೆ ಚದುರಿಸಿದರು. ಆದರೆ ಈ ವಾರ ಪೊಲೀಸರು ದಲ್ಲಾಳಿಗಳಿಂದ ಮಾಮೂಲಿ ಪಡೆದು ಸಂತೆ ನಡೆಯುವಂತೆ ಸಹಕರಿಸಿದರಿಂದ ರೋಗ ಮತ್ತಷ್ಟು ಹೆಚ್ಚಲವಾಗುವಂತಾಗಿದೆ. ಪಶುಸಂಗೋಪನ ಇಲಾಖೆ ಸಹಾಯಕ ನಿರ್ದೇಶಕರೂ ಜ್ವರ ನಿಯಂತ್ರಣಕ್ಕೆ ಸಹಕರಿಸುತ್ತಿಲ್ಲ ಎಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ. ಸಂತೆ ನಡೆಯದಂತೆ ತಡೆಯುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದ್ದು ಕೂಡಲೆ ಜಿಲ್ಲಾಧಿಕಾರಿಗಳು ಕ್ರಮವಹಿಸಿ ಸಂತೆಗೆ ಲಗಾಮು ಹಾಕಬೇಕೆಂದು ರೈತರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

