ಕೋಲಾರ

ನಗರಸಭೆಯಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಒತ್ತಾಯ

Published On :

ಕ.ಪ್ರ.ವಾರ್ತೆ  ಕೋಲಾರ  ಅ.12
ನಗರಸಭೆಯಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಯನ್ನು ಲೋಕಾಯುಕ್ತರಿಗೆ ಒಪ್ಪಿಸಬೇಕೆಂದು ನಗರಸಭೆಯ ಸದಸ್ಯರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿನ ಸಮಸ್ಯೆಗಳು ಹಾಗೂ ನಗರಸಭೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಚರ್ಚಿಸಲು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಎಲ್ಲಾ ಸದಸ್ಯರ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಚುನಾವಣೆ ನಡೆದು 7 ತಿಂಗಳು ಕಳೆದರೂ ಸಮಿತಿ ರಚನೆಯಾಗದೆ ಕೆಲ ಸಮಸ್ಯೆಗಳು ಎದುರಾಗಿದ್ದು ಇವುಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು ಮೊದಲನೆಯದಾಗಿ ನೀರಿನ ಸಮಸ್ಯೆ, ಕಸವಿಲೇವಾರಿ, ಬೀದಿ ದೀಪಗಳ ನಿರ್ವಹಣೆ, ಒಳಚರಂಡಿ ಸಮಸ್ಯೆ, ನಕಲಿ ಬಿಲ್ಲುಗಳ ಬಗ್ಗೆ, ರಸ್ತೆ ಹಾಗೂ ಇತರೆ ಕಾಮಗಾರಿಗಳ ಬಗ್ಗೆ, ಕೆಲವು ನಗರಸಭೆ ಅಧಿಕಾರಿಗಳ ಭ್ರಷ್ಟಾಚಾರ, ನಗರಸಭೆಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸೋಮಶೇಖರ್, ಮಂಜುನಾಥ್, ನಾರಾಯಣಸ್ವಾಮಿ, ಮುರಳಿಗೌಡ, ರಮೇಶ್ ಇನ್ನು ಮುಂತಾದ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.