ಕೋಲಾರ

ಪ್ರಥಮ ದರ್ಜೆ ಕಾಲೇಜಿಗೆ ಅನುದಾನ

Published On :

ಚಿಕ್ಕಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗಾಗಿ ರಾಜ್ಯಸಭಾ ಸದಸ್ಯ ಎಸ್.ಎಂ. ಕೃಷ್ಣರವರು ತಮ್ಮ ಅನುದಾನದಿಂದ ರು. 10 ಲಕ್ಷ  ನೀಡಿದ್ದು ತಾವು ಸಹ ಅಗತ್ಯವಿರುವ ಸವಲತ್ತುಗಳನ್ನು ಒದಗಿಸುವ ಮೂಲಕ ಕಾಲೇಜಿನಲ್ಲಿನ ಸಮಸ್ಯೆಗಳನ್ನು ದೂರ ಮಾಡುವುದಾಗಿ ಶಾಸಕ ಡಾ.ಕೆ. ಸುಧಾಕರ್ ಭರವಸೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೇಂಜರಸ್, ರೋವರಸ್ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜಿಲ್ಲಾ ಕೇಂದ್ರದಲ್ಲಿದ್ದರೂ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದೆ. ಇದನ್ನರಿತು ಈಗಾಗಲೇ ಕಾಲೇಜಿನ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಮುಂದಿನ ಭವಿಷ್ಯಕ್ಕಾಗಿ ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಬೇಕು. ಆಗ ಉಜ್ವಲ ಭವಿಷ್ಯವನ್ನು ಕಾಣಲು ಸಾಧ್ಯವಾಗುತ್ತದೆ. ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಮಾತನಾಡಿದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಜಾನಪದ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್, ಪ್ರೊ.ಬಿ.ವಿ. ಕೃಷ್ಣಪ್ಪ, ಗಜೇಂದ್ರ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.