ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿ ಸಂಘ, ವೆಬ್ಸೈಟ್ಗೆ ಚಾಲನೆ
ಕೆಜಿಎಫ್: ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮತ್ತು ಉದ್ಯೋಗವಕಾಶ ಕಲ್ಪಿಸಿಕೊಳ್ಳಲು ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾ ಸಂಸ್ಥೆಯಲ್ಲಿ ವೆಬ್ಸೈಟ್ ಅಳವಡಿಸಿದ್ದು ಅಲ್ಲದೆ ಕರ್ನಾಟಕ ರಾಜ್ಯದಲ್ಲೇ ಪ್ರಥಮ ಕಾಲೇಜು ಎಂಬ ಖ್ಯಾತಿ ಪಡೆದಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮೊಹಮ್ಮದ್ ಅನ್ಸಾರ್ ಮಾತನಾಡಿದರು.
ಕೆಜಿಎಫ್ ನಗರದ ಕೋರಮಂಡಲ್ ಪ್ರದೇಶದ ಸರ್ಕಾರಿ ಪಾಲಿಟೆಕ್ನಿಕ್ ತಾಂತ್ರಿಕ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘ ಹಾಗೂ ವೆಬ್ಸೈಟ್ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಅದೇ ರೀತಿ ಈ ವೆಬ್ಸೈಟ್ ಮೂಲಕ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಬಗ್ಗೆ ಹಾಗೂ ಇತರೆ ತಾಂತ್ರಿಕಾ ವಿದ್ಯಾ ಕೇಂದ್ರ ಸೇರಿದಂತೆ ಕಂಪನಿಗಳ ಹಾಗೂ ಕಾಲೇಜುಗಳ ಮಾಹಿತಿ ವಿವರಣೆಗಳ ಬಗ್ಗೆ ತಿಳಿವಳಿಕೆ ಮೂಡಿಸಿಕೊಳ್ಳಬಹುದಾಗಿದೆ. ಅಲ್ಲದೆ ವಿದ್ಯಾರ್ಥಿಗಳು ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಪಡೆದ ಅಂಕಗಳು ಹಾಗೂ ವಿದ್ಯಾಭ್ಯಾಸದ ಮಾಹಿತಿಯನ್ನು ಪೊಷಕರು ಈ ವೆಬ್ಸೈಟ್ ಮೂಲಕ ತಿಳಿದುಕೊಳ್ಳಬಹುದು ಎಂದು ತಿಳಿಸಿದರು.
ಇದೇ ವೇಳೆ ಪರೀಕ್ಷೆಯಲ್ಲಿ ಉತ್ತಮ ಅಂಗಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಸನ್ಮಾನಿಸಿದರು. ಕೆಜಿಎಫ್ ಪಾಲಿಟೆಕ್ನಿಕ್ ಪ್ರಾಂಶುಪಾಲ ಸುರೇಶ್ ಗಣೇಶ್, ತಾಂತ್ರಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಿವೆಕ್ ಅಲೆಕ್ಸಾಂಡರ್, ಮುಳಬಾಗೀಲು ಪ್ರಾಂಶುಪಾಲ ಕೃಷ್ಣಮೂರ್ತಿ ಸೇರಿದಂತೆ ವಿದ್ಯಾರ್ಥಿ ಮುಖಂಡರಾದ ಅಮರನಾಥ್, ಭಾಸ್ಕರ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

