ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕರ ಪ್ರಚಾರ
ಚಿಕ್ಕಬಳ್ಳಾಪುರ: ತಾಲೂಕು ವ್ಯವಸಾಯ ಉತ್ಪನ್ನ ಮಾರುಕಟ್ಟೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಶಾಸಕ ಡಾ.ಕೆ. ಸುಧಾಕರ್ ಮತಯಾಚಿಸಿದರು.
ಕೃಷಿ ಕ್ಷೇತ್ರಕ್ಕೆ ವಿಶೇಷವಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆಗೆ ತರುತ್ತಿದೆ ಹಾಗೂ ಸಾಕಷ್ಟು ಅನುದಾನ ನೀಡುತ್ತಿದೆ. ಸಹಕಾರಿ ಕ್ಷೇತ್ರದಂತೆ ಸ್ಥಳೀಯ ಸಂಸ್ಥೆಗಳು ಕಾಂಗ್ರೆಸ್ ಪಾಲಾದರೆ ಆಡಳಿತಯಂತ್ರದಲ್ಲಿ ಪಕ್ಷದ ಬಲ ವೃದ್ಧಿಯಾಗುತ್ತದೆ. ಇದರಿಂದ ಸರ್ಕಾರದ ಯೋಜನೆಗಳು ಕೈ ತಲುಪುತ್ತವೆ. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಕೋರಿದರು.
ಜೆಡಿಎಸ್ ಮಾಡುತ್ತಿರುವ ಆರೋಪ ನಿರಾಧಾರ, ಅದರಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್ ಪ್ರಾಬಲ್ಯ ಹೊಂದಿದ್ದು ಪಕ್ಷದ ಅಭ್ಯರ್ಥಿಗಳನ್ನು ಜನರು ಗೆಲ್ಲಿಸುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಬೇಕೆಂದರು. ತಾಲೂಕಿನ ಕೊಳವನಹಳ್ಳಿ, ಬೊಮ್ಮನಹಳ್ಳಿ, ಪಾಲಹಳ್ಳಿ, ನಕ್ಕಲಹಳ್ಳಿ, ಕಣ ತಹಳ್ಳಿ, ತಿಮ್ಮೇನಹಳ್ಳಿ, ಕೊಂಡೇನಹಳ್ಳಿ, ಹುನೇಗಲ್, ಹಾರೋಬಂಡೆ, ಅಜ್ಜವಾರ, ಅಗಲಗುರ್ಕಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿದ ಶಾಸಕರು ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಎ.ಎನ್. ಕೃಷ್ಣಪ್ಪ, ಪಿ.ಎನ್. ಕೃಷ್ಣಪ್ಪ, ಕೆ.ಎಚ್. ತಮ್ಮೇಗೌಡ, ಜಿ.ಬಿ. ಶ್ರೀರಾಮರೆಡ್ಡಿ, ಕೆ.ಎಂ. ರಾಮಚಂದ್ರ, ಬಿ. ಕೃಷ್ಣಪ್ಪ, ಪಿ.ಎನ್. ಕೇಶವರೆಡ್ಡಿ, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ನಗರಸಭೆ ಸದಸ್ಯ ಗಜೇಂದ್ರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

