ಕೋಲಾರ

'ಜನರ ನಡುವೆ ಪ್ರೀತಿ ವಿಶ್ವಾಸ ಮುಖ್ಯ'

Published On :

ಚಿಂತಾಮಣಿ: ಜನರು ನೆಮ್ಮದಿಯಿಂದ ಬದುಕಲು ಪ್ರೀತಿ ವಿಶ್ವಾಸ ಮುಖ್ಯ ಎಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹೇಳಿದರು.
ಪಟ್ಟಣದ ನಗರಸಭಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಗೌರಿ ಗಣೇಶ ಹಬ್ಬದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ ಹಲವು ಗೆಳೆಯರ ಬಳಗಕ್ಕೆ ಬಹುಮಾನ ನೀಡಿ ನಾಗರಿಕರು ಶಾಂತಿ ವಿಶ್ವಾಸ ಬಯಸಿದಲ್ಲಿ ಸಮಾಜ ಸುಧಾರಣೆ ಮಾಡಲು ಸಾಧ್ಯ ಎಂದರು.
ಜಿಲ್ಲಾ ರಕ್ಷಣಾಧಿಕಾರಿ ಎನ್. ಶಿವಪ್ರಸಾದ್ ಮಾತನಾಡಿ, ಹಿಂದು-ಮುಸ್ಲಿಂ ಸಹೋದರರು ನವರಾತ್ರಿ ಹಾಗೂ ಬಕ್ರೀದ್ ಹಬ್ಬವನ್ನು ಶಾಂತಿಯಿಂದ ಆಚರಿಸಲು ಮನವಿ ಮಾಡಿದರು. ಡಿವೈಎಸ್ಪಿ ಸಣ್ಣತಿಮ್ಮಯ್ಯ, ತಾಪಂ ಉಪಾಧ್ಯಕ್ಷ ಸುಲ್ತಾನ್,ನಗರಸಭಾ ಸದಸ್ಯರಾದ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ನಟರಾಜ್, ಪ್ರಕಾಶ್, ಮಂಜು ಭಾಗವಹಿಸಿದ್ದರು.
ಯೋಜನೆಗಳು ಸಾಮಾನ್ಯರಿಗೆ ತಲುಪುತ್ತಿಲ್ಲ
ಬಾಗೇಪಲ್ಲಿ: ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿಗೆ ತರುತ್ತಿದೆಯಾದರೂ ರಾಜಕೀಯ ನಾಯಕರ ಬೆಂಬಲಿಗರು ಸವಲತ್ತುಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ವಿಷಾಧ ವ್ಯಕ್ತಪಡಿಸಿದರು.
ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳ ಬಗ್ಗೆ ಅಧಿಕಾರಿಗಳು ಪ್ರಚಾರ ಕೈಗೊಂಡು ಜನರಿಗೆ ಮಾಹಿತಿ ನೀಡಬೇಕು. ಆದರೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ಒದಗಿಸುವಲ್ಲಿ ವಿಫರಾಗಿದ್ದಾರೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಯಲ್ಲಂಪಲ್ಲಿ ಗ್ರಾಮದಲ್ಲಿ ಆರೋಗ್ಯ ಕೇಂದ್ರ ಪ್ರಾರಂಭಿಸುವಂತೆ ಗ್ರಾಮಸ್ಥರು ಮಾಡಿದ ಮನವಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಪಶು ಇಲಾಖೆಯ ಸಹಾಯ ನಿರ್ದೇಶಕ ವೆಂಕಟೇಶ್ ಮಾತನಾಡಿ, ತಾಲೂಕಿನಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡು ಈಗಾಗಲೇ ಸುಮಾರು 23 ಕ್ಕೂ ಅಧಿಕ ಹಸುಗಳು ಸತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪಶು ವೈದ್ಯ ಇಲಾಖೆ ಉಚಿತವಾಗಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ತಹಸೀಲ್ದಾರ್ ಎಂ.ಎ. ಪಧ್ಮ, ಜಿಪಂ ಎಇಇ ಪಿ.ವಿ. ನಾಗಪ್ಪ, ತಶೋಭಾರಾಣಿ, ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್, ಪ್ರಭಾಕರ್, ಜೆ. ಕೃಷ್ಣಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.