ಶಾಶ್ವತ ನೀರಾವರಿಗೆ ಆಗ್ರಹಿಸಿ 28 ರಂದು ರೈತ ಸಮಾವೇಶ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಅ.12
ಬಯಲು ಸೀಮೆಯ 8 ಜಿಲ್ಲೆಗಳ ಉಳಿವಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸುವುದರ ಜತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಒತ್ತಾಯಿಸಿ, ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಮುಕ್ತ ಮಾರುಕಟ್ಟೆ ಹೆಸರಿನಲ್ಲಿ ಹೊರ ದೇಶಗಳಿಂದ ದೇಶದ ರೈತರು ಉತ್ಪಾದಿಸುವ ವಸ್ತುಗಳನ್ನೇ ಆಮದು ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅ.28 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ಸಮಸ್ಯೆಗಳನ್ನು ಅನುಭವಿಸುತ್ತಿರುವ ಬಯಲು ಸೀಮೆಯ ಭಾಗಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕೆಂದು ಪ್ರಮುಖವಾಗಿ ಒತ್ತಾಯಿಸಲಾಗುವುದು ಎಂದರು.
ಬಯಲು ಸೀಮೆ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಡಾ.ಪರಮಶಿವಯ್ಯನವರ ವರದಿಯಾಧಾರಿತ ನೀರಾವರಿ ಯೋಜನೆ ಜಾರಿಗೆ ತರಬೇಕು. ಇದಕ್ಕಾಗಿ ಈ ಭಾಗದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜನರ ಸಭೆಯನ್ನು ಕೂಡಲೇ ಕರೆದು ಅನುಮಾನಗಳನ್ನು ಬಗೆಹರಿಸಿ ಪಶ್ಚಿಮಘಟ್ಟಗಳಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಪಾಲಾಗುತ್ತಿರುವ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಮರೋಪಾದಿಯಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

