ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು
ಗೌರಿಬಿದನೂರು: ಚಲಿಸುತ್ತಿದ್ದ ಕಾರು ಆಕಸ್ಮಿಕವಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಇನ್ನಿಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತಾಲೂಕಿನ ಬಿಸಲಹಳ್ಳಿಯ ಕುಕ್ಕಲಮ್ಮನ ಗುಡಿ ಸಮೀಪ ಸಂಭವಿಸಿದೆ.
ರಾಜಣ್ಣ(48), ನರಸಿಂಹಮೂರ್ತಿ(50)ಗ್ರಾಮೀಣ ಬ್ಯಾಂಕ್ ಉದ್ಯೋಗಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದು ವಾಹನ ಚಾಲನೆ ಮಾಡುತ್ತಿದ್ದ ಸಂತೋಷ್(24)ಮತ್ತು ಶ್ರೀನಾಥ್(22)ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹಾಸ್ಮಟ್ ಆಸ್ಪತ್ರೆಗೆ ಕಳುಹಿಸಲಾಗಿದೆ. ನಾಲ್ಕೂಜನ ಬಿಸಲಹಳ್ಳಿ ಗ್ರಾಮದಿಂದ ಗೌರಿಬಿದನೂರಿಗೆ ಹೊರಟಿದ್ದರು. ಮಂಚೇನಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಹಲ್ಲೆ; ಪ್ರಾಣ ಬೆದರಿಕೆ
ಕೆಜಿಎಫ್: ಬೈಕನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಬ್ಲೇಡ್ನಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ಕತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಮೆಲ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕತ್ತಿಹಳ್ಳಿ ಗ್ರಾಮದ ನಿವಾಸಿ ವೆಂಕಟರಾಮಪ್ಪ ಎಂಬವರ ಪತ್ನಿ ಲಕ್ಷ್ಮಮ್ಮ ಅವರು ಹಸುಗಳನ್ನು ಹಿಡಿದುಕೊಂಡು ಬರುತ್ತಿದ್ದಾಗ ಅದೇ ಗ್ರಾಮದ ಚಂದ್ರ ಎಂಬವರು ಟಿವಿಎಸ್ ವಾಹನವನ್ನು ದಾರಿಗೆ ಅಡ್ಡವಾಗಿ ನಿಲ್ಲಿಸಿದ್ದರು. ಲಕ್ಷ್ಮಮ್ಮ ವಾಹನವನ್ನು ಪಕ್ಕಕ್ಕೆ ತೆಗೆಯುವಂತೆ ಹೇಳಿದಕ್ಕೆ ಅವರನ್ನು ಕೆಟ್ಟಮಾತುಗಳಿಂದ ಬೈದಿದ್ದು ಹಲ್ಲೆಗೆ ಮುಂದಾದನು ಎನ್ನಲಾಗಿದೆ. ವಿಷಯ ತಿಳಿದು ಆಕೆಯ ಪತಿ ವೆಂಕಟರಾಮಪ್ಪ ವಿಚಾರಿಸಲು ಬಂದಾಗ ಚಂದ್ರ ಹಾಗೂ ಆತನ ಸ್ನೇಹಿತ ರಾಮದಾಸ್ ಬ್ಲೇಡ್ನಿಂದ ಮುಖದ ಮೇಲೆ ಹಲ್ಲೆ ಮಾಡಿದ್ದಲ್ಲದೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವೆಂಕಟರಾಮಪ್ಪ ಬೆಮೆಲ್ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

