ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬಾಗೇಪಲ್ಲಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎಚ್.ಎನ್. ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತೆಯರ ನೌಕರರ ಸಂಘ(ಸಿಐಟಿಯು ಸಂಯೋಜಿತ)ಸಾರ್ವಜನಿಕ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿತು.
ಪತ್ರಿಭಟನಾಕಾರರನ್ನು ಉದ್ದೇಶಿಸಿ ಆಶಾ ಕಾರ್ಯಕರ್ತೆಯರ ನೌಕರರ ಸಂಘದ ತಾಲೂಕು ಅಧ್ಯಕ್ಷೆ ರಾಧ ಮಾತನಾಡಿ, ಸರ್ಕಾರದ ವಿವಿಧ ಯೋಜನೆಯಡಿ ದುಡಿಯುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಕೂಲಿ, ಕೆಲಸದ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮಗಳು ಕೈಗೊಳ್ಳುವಂತೆ ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಶೋಷಣೆ ತಕ್ಷಣ ನಿಲ್ಲಬೇಕು,ಕೆಲಸ ನಿರ್ವಹಿಸುವ ಪ್ರದೇಶಗಳಲ್ಲಿ ದಾಳಿ-ದಬ್ಬಾಳಿಕೆ ನಡೆದಾಗ ಸೂಕ್ತ ರಕ್ಷಣೆ ಒದಗಿಸಬೇಕು, ಗ್ರಾಮೀಣ ಪ್ರದೇಶಗಳಲ್ಲಿನ ನರ್ಸ್ಗಳು ನಿವೃತ್ತಿಯಾದಾಗ ಆ ಸ್ಥಾನಗಳಿಗೆ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿಯನ್ನು ನೀಡಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ನಂತರ ಪ್ರತಿಭಟನಾಕಾರರು ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳಿಗೆ ಮನವಿ ನೀಡಿದರು.
ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಕಾರ್ಯದರ್ಶಿ ಸುಬ್ಬಮ್ಮ, ಖಜಾಂಚಿ ಭಾಗ್ಯಮ್ಮ, ಸಿಐಟಿಯು ತಾಲೂಕು ಕಾರ್ಯದರ್ಶಿ ಜಿ. ಮುಸ್ತಾಫ್ ಭಾಗವಹಿಸಿದ್ದರು.
ಬೈಕ್ ಅಡ್ಡಗಟ್ಟಿ ನಗದು ದರೋಡೆ
ಕೆಜಿಎಫ್: ಬೈಕಿನಲ್ಲಿ ಬರುತ್ತಿದ್ದಾಗ ಅಡ್ಡಗಟ್ಟಿದ ದರೋಡೆ ಕೋರರು ಬೈಕ್ ಮತ್ತು ನಗದನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾರಂಡಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಬಿಲ್ಲೇರಪಲ್ಲಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡಿದ್ದು ಮನೆಗೆ ಬರುತ್ತಿರುವಾಗ ನಾಲ್ವರು ಅಪರಿಚಿತ ದರೋಡೆ ಕೋರರು ದ್ವಿಚಕ್ರವಾಹನವನ್ನು ಅಡ್ಡಗಟ್ಟಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಿದ್ದು ಸೋಮೇಶ್ ಎಂಬವರು ದರೋಡೆ ಕೋರರಿಂದ ತಪ್ಪಿಸಿಕೊಂಡಿದ್ದು ದ್ವಿಚಕ್ರ ವಾಹನ ಸೇರಿದಂತೆ ವೆಂಕಟೇಶ್ ಬಳಿಯಿದ್ದ 5 ಸಾವಿರ ನಗದು, ಒಂದು ಮೊಬೈಲ್ ಫೋನ್ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೆಂಕಟೇಶ್ ಆಂಡ್ರಸನ್ಪೇಟೆ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
ದರೋಡೆ ಪ್ರಕರಣದ ದೂರು ದಾಖಲಿಸಿಕೊಂಡ ಪಿಎಸ್ಐ ಎಲ್. ಆಂಜಪ್ಪ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

