ಕೋಲಾರ

ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

Published On :

ಚಿಂತಾಮಣಿ: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅ.18 ರಂದು ಬೆಳಗ್ಗೆ 9.30ಕ್ಕೆ ಮಿನಿ ವಿಧಾನಸೌದ ಮುಂಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಾಲೂಕು ದಂಡಾಧಿಕಾರಿ ಎಂ.ಎನ್.ಮಂಜುನಾಥ್ ತಿಳಿಸಿದ್ದಾರೆ.
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ತಾಪಂ ಅಧ್ಯಕ್ಷ ಕೆ.ವಿ.ಮೀನಾಶ್ರೀರಾಮರೆಡ್ಡಿ ಕಾರ್ಯಕ್ರಮದ ಉದ್ಘಾಟಿಸುವರು. ಸ್ತಬ್ಧಚಿತ್ರ ಹಾಗೂ ಮೆರವಣಿಗೆ ಉದ್ಘಾಟನೆಯನ್ನು ಜಿಪಂ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ ನೆರವೇರಿಸಲಿದ್ದಾರೆ.
ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಎ.ಎಚ್.ಶಿವಯೋಗಿಸ್ವಾವು, ವೈ.ಎ.ನಾರಾಯಣಸ್ವಾಮಿ, ಡಿ.ಎಸ್.ವೀರಯ್ಯ, ನಸೀರ್ ಅಹಮದ್, ಶಾಸಕ ಎಂ.ರಾಜಣ್ಣ ಭಾಗವಹಿಸಲಿದ್ದಾರೆ.
ಎಪಿಎಂಸಿ ಅಧ್ಯಕ್ಷ ಎಸ್.ವಿ.ನಾರಾಯಣಸ್ವಾಮಿ, ಕೃಷಿಕ ಸಮಾಜ ಅಧ್ಯಕ್ಷರು ಎಂ.ಗೋವಿಂದಪ್ಪ, ತಾಪಂ ಉಪಾಧ್ಯಕ್ಷ ಸುಲ್ತಾನ್ ಷರೀಫ್, ಎಪಿಎಂಸಿ ಉಪಾಧ್ಯಕ್ಷ ರತ್ನಮ್ಮ, ಕೃಷಿಕ ಸಮಾಜ ಉಪಾಧ್ಯಕ್ಷ ಅಶ್ವಥನಾರಾಯಣರೆಡ್ಡಿ, ಪೊಲೀಸ್ ಉಪ ಅಧೀಕ್ಷಕ ಸಣ್ಣತಿಮ್ಮಯ್ಯ, ನಗರಸಭೆ ಆಯುಕ್ತ ಚನ್ನೇಗೌಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಸಂತಕುಮಾರ್, ಬಿಇಒ ಕೆ.ಜಿ.ರಂಗಯ್ಯ ಸೇರಿದಂತೆ ತಾಲ್ಲೂಕಿನ ಎಲ್ಲಾ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಕನ್ನಡ ಚಿತ್ರ ಕಡ್ಡಾಯ ಪ್ರದರ್ಶನಕ್ಕೆ ಮನವಿ
ಚಿಂತಾಮಣಿ:
ನವೆಂಬರ್‌ನಲ್ಲಿ ಪಟ್ಟಣದ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬೇಕೆಂದು ತಾಲೂಕು ಕನ್ನಡ ಜಾಗೃತಿ ವೇದಿಕೆ ತಾಲೂಕು ದಂಡಾಧಿಕಾರಿಗಳನ್ನು ಆಗ್ರಹಿಸಿದೆ.
ಪಟ್ಟಣವು ಗಡಿನಾಡಿಗೆ ಸಂಬಂಧಿಸಿದೆ. ಇಲ್ಲಿ ವರ್ಷ ಪೂರ್ತಿ ಪರಭಾಷಾ ಚಿತ್ರಗಳು ಹೆಚ್ಚು ಪ್ರದರ್ಶನವಾಗುತ್ತಿವೆ. ಆದರೆ ನವೆಂಬರ್‌ನಲ್ಲಾದರೂ ನಮ್ಮ ಕನ್ನಡ ಚಿತ್ರಗಳನ್ನು ಪ್ರದರ್ಶಿಸಿ ಇಲ್ಲಿನ ಕನ್ನಡ ಅಭಿಮಾನಿಗಳಿಗೆ ಹಾಗೂ ಸಮಸ್ತ ಕನ್ನಡಿಗರ ಪರವಾಗಿ ತಾಲೂಕಿನ ದಂಡಾಧಿಕಾರಿಗಳಲ್ಲಿ ವೇದಿಕೆ ಕೇಳಿಕೊಂಡಿದೆ. ಅಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಆದೇಶ ಹೊರಡಿಸಬೇಕೆಂದು ಕನ್ನಡ ಜಾಗೃತಿ ಸಮಿತಿಯ ಜಿಲ್ಲಾ ಅಧ್ಯಕ್ಷ ಎಂ.ವಿ.ನಾಗರಾಜ್, ತಾಲೂಕು ಅಧ್ಯಕ್ಷ ಆರ್.ನಾಗರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ತಿನಕಲ್ ವೆಂಕಟೇಶ್, ಪದಾಧಿಕಾರಿಗಳಾದ ಮಂಜುನಾಥ್, ಕಿಶೋರ್, ರವಿಕುಮಾರ್, ಶಿವಣ್ಣ, ಸುರೇಶ್, ಮಂಜುನಾಥ್, ಅಶೋಕ್‌ಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.