ಕೋಲಾರ

ಗಾಂಧೀಜಿ ಸ್ಮರಿಸಿದ ಹಿರಿ ಜೀವಿಗಳು

Published On :

ಚಿಂತಾಮಣಿ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ತಾಲೂಕು ನಿವೃತ್ತ ಸರ್ಕಾರಿ ನೌಕರರ ಮಾಸಿಕ ಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸಿದ ಹಿರಿಯ ಜೀವಿಗಳು, ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜತೆಗೆ ಅವರ ಆದರ್ಶಗಳನ್ನು ಕೊನೆಯ ತನಕ ಪಾಲಿಸುವುದಾಗಿ ಪ್ರಮಾಣ ಮಾಡಿದರು. ನಿವೃತ್ತ ಹಿರಿಯ ಶಿಕ್ಷಕರಾದ ರೆಡ್ಡೆಪ್ಪಚಾರ್ ಬಾಪೂಜಿಯವರು ಜೀವನ ಹಾಗೂ ಹೋರಾಟದ ಹಾದಿಯ ಬಗ್ಗೆ ವಿವರಿಸಿ ಹಿರಿಯ ನಾಗರಿಕರು ಗಾಂಧೀಜಿಯವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕಾಗತಿ ವಿ.ವೆಂಕಟರತ್ನಂ, ಮಾತನಾಡಿ ಗಾಂಧೀಜಿಯವರು ಸತ್ಯ-ಅಹಿಂಸೆ ಎಂಬ ಅಸ್ತ್ರಗಳನ್ನು ಬಳಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷ ಎಂದು ಬಣ್ಣಿಸಿದರು. ಇದೇ ತಿಂಗಳ 27 ರಂದು ಭಾನುವಾರ ಮಹಾತ್ಮ ಗಾಂಧಿ ಪ್ರೌಢಶಾಲೆ ಆವರಣದಲ್ಲಿ ದಸರಾ ಹಬ್ಬದ ಪ್ರಯುಕ್ತ ಹಿರಿಯ ನಾಗರಿಕರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಿದ್ದು ಸ್ಪರ್ಧಿಗಳು ಭಾಗವಹಿಸುವಂತೆ ಕೋರಿದರು. ವೈದ್ಯಾಧಿಕಾರಿಗಳಾದ ಎಲ್.ಆರ್.ವರದರಾಜ್ ಮಾತನಾಡಿ, ರಕ್ತದಾನ ಮಾಡುವ ವಿಧಿ-ವಿಧಾನಗಳ ಬಗ್ಗೆ ಹಾಗೂ ಅದರಿಂದಾಗುವ ಪ್ರಯೋಜನಗಳ ಬಗ್ಗೆ ಸವಿವರವಾಗಿ ತಿಳಿಸಿಕೊಟ್ಟರು. ಸಂಘದ ಉಪಾಧ್ಯಕ್ಷ ಸತ್ಯಕೀರ್ತಿ ನಿವೃತ್ತ ನೌಕರರ ಬಗ್ಗೆ ಬೆಳಕು ಚೆಲ್ಲಿದರು. ಉಪಖಜಾನೆಯಲ್ಲಿ ಪಿಂಚಣಿ ಚಕ್ಕು ಪದ್ಧತಿ ನಿಲ್ಲಿಸಿದ್ದು ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದವರು ಉಪಖಜಾನೆಯಲ್ಲಿ ಸಂಪರ್ಕಿಸಿ ವಿವರಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು. ಇಬ್ಬರು ಹಿರಿಯ ನಾಗರಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.