'ಗ್ರಾಪಂ ನೌಕರರು ಸಂಘಟಿತರಾಗಿ'
ಶಿಡ್ಲಘಟ್ಟ: 20 ವರ್ಷಗಳ ನಿರಂತರ ಹೋರಾಟದಿಂದ ಕನಿಷ್ಠ ವೇತನ ಸರ್ಕಾರ ನಿಗದಿಮಾಡಿದ್ದು ಗ್ರಾಪಂಗಳು ಗ್ರಾಪಂ ನೌಕರರಿಗೆ ಕನಿಷ್ಠ ವೇತನ ಇನ್ನೂ ಆಳವಡಿಸಿಕೊಂಡಿಲ್ಲ ಎಂದು ಜಿಲ್ಲಾ ಗ್ರಾಪಂ ಅಧ್ಯಕ್ಷ ಸಿದ್ದಗಂಗಪ್ಪ ಆರೋಪಿಸಿದರು.
ನವೆಂಬರ್ 8,9,10 ರಂದು ಬೆಳಗಾಂ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಂಡಿದ್ದು ಪೂರ್ವಬಾವಿಯಾಗಿ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲು ತಾಲೂಕು ಮಟ್ಟದಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಮಾವೇಶ ನಡೆಸಲಾಯಿತು. ಪಂ ಅಧ್ಯಕ್ಷ ಸಿದ್ದಗಂಗಪ್ಪ ಮಾತನಾಡಿ, ಕರ್ನಾಟಕದಲ್ಲಿ 2,600 ಗ್ರಾಪಂಗಳಿದ್ದು ಸುಮಾರು 50,000 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಸರ್ಕಾರ ಮಲತಾಯಿ ದೋರಣೆ ನಡೆಸುತ್ತಿದೆ ಎಂದು ಆರೋಪಿಸಿದರು.
ತಾಲ್ಲೂಕಿನಲ್ಲಿ 27 ಗ್ರಾಪಂಗಳಿದ್ದು ಸುಮಾರು 300 ಜನ ನೌಕರರು ಕೆಲಸ ಮಾಡುತ್ತಿದ್ದು ಸಂಘಟಿತರಾಗಿ ಹೋರಾಟ ಮಾಡಬೇಕೆಂದು ಕರೆ ನೀಡಿದರು. ಜಿಲ್ಲಾ ಜಂಟಿ ಕಾರ್ಯದರ್ಶಿ ಮುನಿಕೃಷ್ಣಪ್ಪ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಲಕ್ಷೀದೇವಮ್ಮ, ಪಾಪಣ್ಣ, ಸುದರ್ಶನ್ ಹಾಜರಿದ್ದರು.
ಅವಧಿ ವಿಸ್ತರಣೆ
ಚಿಕ್ಕಬಳ್ಳಾಪುರ: ವಿದ್ಯಾಸಿರಿ-ಊಟ ವಸತಿ ಸಹಾಯ ಯೋಜನೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ವಿಸ್ತರಿಸಲಾಗಿದೆ. ಅ.15 ಅರ್ಜಿ ಸಲ್ಲಿಸಲು ಕೊನೆಯ ದಿನ ಎಂದು ತಿಳಿಸಿದ್ದು ಈಗ ಅ.22 ರವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗಂಗನಮಿದ್ದೆ ರಸ್ತೆ, ಚಿಕ್ಕಬಳ್ಳಾಪುರ, ದೂ-08156-273553 ಸಂಪರ್ಕಿಸಿ.
ಪ್ರಗತಿ ಪರಿಶೀಲನಾ ಸಭೆ
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅ.21 ರಂದು ಬೆಳಿಗ್ಗೆ 11.30 ಗಂಟೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ನಾಗಾಂಭಿಕಾದೇವಿರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಅಯೋಜಿಸಲಾಗಿದೆ ಎಂದು ಜಿಪಂ ಸಿಇಒ ನೀಲಾ ಮಂಜುನಾಥ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

