ಶಾಸಕರ ಬೆಂಬಲಿಗರಿಂದ ತಿರುಗೇಟು
ಚಿಕ್ಕಬಳ್ಳಾಪುರ: ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಕೆ.ಸುಧಾಕರ್ ಬಿಜೆಪಿ ಜತೆಗೆ ಕೈ ಜೋಡಿಸಲಿಲ್ಲ. ಬದಲಿಗೆ ಕಾಂಗ್ರೆಸ್ ಕೆಲ ಮುಖಂಡರು ಜೆಡಿಎಸ್ ಬೆಂಬಲ ನೀಡಿ ಗೆಲುವಿಗೆ ಕಾರಣರಾದರು ಎಂದು ಶಾಸಕರ ಬೆಂಬಲಿಗರು ಹೇಳುವ ಮೂಲಕ ತಮ್ಮ ಪಕ್ಷದವರಿಗೇ ತಿರುಗೇಟು ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋವಿಂದ ಸ್ವಾಮಿ, ಕೃಷ್ಣಮೂರ್ತಿ, ಕ್ಷೇತ್ರದಲ್ಲಿ ಶಾಸಕರ ಪರ ಹೆಚ್ಚಿನ ಒಲವಿದ್ದು ಟಿಎಪಿಸಿಎಂಎಸ್ ಸಂಘವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು ಶಾಸಕ ಸುಧಾಕರ್ ಪಕ್ಷದ ಸಂಘಟನೆಗೆ ಶ್ರಮಿಸಿದರು. ಅಲ್ಲದೇ ಪಕ್ಷದ ತೀರ್ಮಾನದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆಗೆ ನಿಲ್ಲಿಸಿದರು.ಆದರೆ,ಕಾಂಗ್ರೆಸ್‌ನ ಕೆಲ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಜೆಡಿಎಸ್‌ಗೆ ಬೆಂಬಲ ನೀಡಿದರು. ಇದರಿಂದ ಜೆಡಿಎಸ್ ಸುಲಭವಾಗಿ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿತು ಎಂದು ಆರೋಪಿಸಿದರು.
ಪಕ್ಷದ ಗೆಲುವಿಗೆ ಶ್ರಮಿಸಬೇಕಾಗಿರುವುದು ಪ್ರತಿಯೊಬ್ಬ ಮುಖಂಡರ ಜವಾಬ್ದಾರಿ.ಆದರೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಪಕ್ಷದ ಶಾಸಕರ ವಿರುದ್ಧವೇ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಮೂಡಿಸಿರುವುದು ಖಂಡನೀಯ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯ ಗಜೇಂದ್ರ, ಮಾಜಿ ಸದಸ್ಯ ಮಿಲ್ಟನ್ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು. ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸೋಲನ್ನಪ್ಪಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಡೇಸ್ ವೆಂಕಟೇಶ್, ಪಕ್ಷದ ಅಭ್ಯರ್ಥಿಗಳ ಸೋಲಿಗೆ ಶಾಸಕರೇ ಹೊಣೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕರ ಬೆಂಬಲಿಗರು ಟೀಕಿಸಿದ್ದು ಒಟ್ಟಾರೆ ಕಾಂಗ್ರೆಸ್ಪ್‌ಕ್ಷದಲ್ಲಿರುವ ಭಿನ್ನಮತ ಬೀದಿಗೆ ಬಂದಿದೆ.
ಇಂದು ವಾಲ್ಮೀಕಿ ಜಯಂತಿ
ಕೋಲಾರ: ಜಿಲ್ಲಾ ಆಡಳಿತ, ಜಿಪಂ ಹಾಗೂ ಇತರ ಇಲಾಖೆಗಳ ಸಹಯೋಗದಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.18ರಂದು ಶುಕ್ರವಾರ ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ಬೆಳಿಗ್ಗೆ 10ಗಂಟೆಗೆ ಕೋಲಾರ ನಗರದ ಕೋಟೆ ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಭವನದಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ಆರಂಭಗೊಳ್ಳಲಿದ್ದು ಮಧ್ಯಾಹ್ನ 2 ಗಂಟೆಗೆ ನಗರದ ಟಿ. ಚನ್ನಯ್ಯರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

