ಕೋಲಾರ

ಸೌಜನ್ಯಾ ಕೊಲೆ; ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Published On :

ಕೋಲಾರ: ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಉಜಿರೆಯ ಎಸ್‌ಡಿಎಂ ಕಾಲೇಜಿನ ಸೌಜನ್ಯಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ)ವತಿಯಿಂದ ನಗರದ ಹೊಸ ಬಸ್ಸು ನಿಲ್ದಾಣವೃತ್ತದಲ್ಲಿ ಶನಿವಾರ ಪ್ರತಿಭಟನೆ  ನಡೆಯಿತು.
ಸೌಜನ್ಯಾಳ ಆತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಅ.9ಕ್ಕೆ 1 ವರ್ಷವಾದರೂ ಆರೋಪಿಯನ್ನು ಬಂಧಿಸಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.
ಸಿಓಡಿ ತನಿಖೆ ವರದಿಯ ನೆಪದಲ್ಲಿ ಪ್ರಕರಣದ ತೀವ್ರತೆ ಕಡಿಮೆ ಮಾಡಲಾಗುತ್ತಿದೆ. ಕೆಲವು ರಾಜಕೀಯ ಪಟ್ಟಭದ್ರರ ಪ್ರಭಾವ, ಒತ್ತಡದಿಂದಾಗಿ ಸರ್ಕಾರ ಸತ್ಯ ಬಹಿರಂಗಕ್ಕೆ ಹಿಂದೇಟು ಹಾಕುತ್ತಿದೆ ಎಂದು ದೂರಿದರು.
ಸೌಜನ್ಯ ಆತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಅ.21 ರಂದು ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ವಾಸುದೇವರೆಡ್ಡಿ, ಸಹಕಾರ್ಯದರ್ಶಿ ಅಮರೇಶ್, ನಗರ ಸಂಚಾಲಕ ಮುಸ್ತಾಪ್, ಅರ್ಪಿತ, ಭವ್ಯಶ್ರೀ, ಅರುಣ, ಸೌಮ್ಯ, ಪೂಜಾ, ಪ್ರತಿಭಾ, ನಾಗವೇಣಿ, ಅರತಿಕೊಂಡೆ, ಮಂಜುಳಾ ಇದ್ದರು.

ಸೌಜನ್ಯಾ ಪ್ರಕರಣ ವಿರೋಧಿಸಿ ಪ್ರತಿಭಟನೆ
ಮಾಲೂರು;
ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅಗ್ರಹಿಸಿ ಸ್ಥಳೀಯ ಭಾರತ ವಿದ್ಯಾರ್ಥಿ ಫೆಡರೇಷನ್ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಸಂಘಟನೆಯ ಜಿಲ್ಲಾಧ್ಯಕ್ಷ ಅಂಬರೀಷ್ ಮಾತನಾಡಿ, ಸೌಜನ್ಯ ಕೊಲೆ ಪ್ರಕರಣದಲ್ಲಿ ಪ್ರಭಾವಿಗಳ ಕೈ ಚಳಕ ಎದ್ದು ಕಾಣುತ್ತಿದ್ದು, ಅವರನ್ನು ತಪ್ಪಿಸಲು ಮಾನಸಿಕ ರೋಗಿಯೂಬ್ಬನನ್ನು ಬಂಧಿಸಿ ಪ್ರಕರಣ ಮುಚ್ಚಲು ಯತ್ಸಿಸಲಾಗುತ್ತಿದೆ ಎಂದು ಆರೋಪಿಸಿದರು. ತಾಲೂಕು ಅಧ್ಯಕ್ಷ ಮಾರ್ಕಂಡಯ್ಯ, ಕಾರ್ಯದರ್ಶಿ ಗೋಪಿ, ಅರುಣ್, ದಿವ್ಯ, ಅಮೀತ್, ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.